ಕರ್ನಾಟಕಕ್ಕೆ ಶಿವಸೈನಿಕರಿಂದ ತಕ್ಕ ಪಾಠ: ವಿವಾದಾತ್ಮಕ ಹೇಳಿಕೆ ನೀಡಿದ ಮಹಾ ಸಚಿವ

ಬೆಂಗಳೂರು, ಡಿಸೆಂಬರ್ 19, 2021 (www.justkannada.in): ಮಹಾರಾಷ್ಟ್ರ ಆರೋಗ್ಯ ಸಚಿವ ಏಕನಾಥ ಶಿಂಧೆ ಪ್ರಚೋದನಕಾರಿ ಹೇಳಿಕೆ ನೀಡುವ ಮೂಲಕ ಮತ್ತೆ ವಿವಾದಕ್ಕೆ ತುಪ್ಪ ಸುರಿದಿದ್ದಾರೆ.

ಕರ್ನಾಟಕಕ್ಕೆ ಶಿವಸೈನಿಕರು ತಕ್ಕ ಪಾಠ ಕಲಿಸಲಿದ್ದಾರೆ. ಶಿವಸೇನೆ ಕಾನೂನು ಕೈಗೆತ್ತಿಕೊಂಡರೆ ಅದಕ್ಕೆ ಕರ್ನಾಟಕ ಸರ್ಕಾರವೇ ನೇರ ಹೊಣೆಯಾಗಲಿದೆ ಎಂದಿದ್ದಾರೆ.

ಬೆಳಗಾವಿ ಹಿಂಸಾಚಾರ ಸಂಬಂಧ ಸಿಎಂ ಬಸವರಾಜ್ ಬೊಮ್ಮಾಯಿ, ಎಂಇಎಸ್ ನಶಿಸಿ ಹೋಗುವ ಕಾಲ ಬಂದಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದರು.

ಇದೀಗ  ಮಹಾರಾಷ್ಟ್ರ ಆರೋಗ್ಯ ಸಚಿವ ತಿರುಗೇಟು ನೀಡಿದ್ದು, ಕಾನೂನು ಕ್ರಮಕ್ಕೆ ಮುಂದಾದರೆ ಕರ್ನಾಟಕ ಸರ್ಕಾರವೇ ಇರುವುದಿಲ್ಲ ಎಂದಿದ್ದಾರೆ.