ಬಿಜೆಪಿಯಿಂದ ಮಹಾರಾಷ್ಟ್ರದಲ್ಲಿ ಅಪರೇಷನ್ ಕಮಲ- ಮಾಜಿ ಸಿಎಂ ಸಿದ್ಧರಾಮಯ್ಯ ಆರೋಪ.

ಕೊಪ್ಪಳ,ಜೂನ್,27,2022(www.justkannada.in): ಮಹಾರಾಷ್ಟ್ರದಲ್ಲಿ ಬಿಜೆಪಿ ಅಪರೇಷನ್ ಕಮಲದ ಮೂಲಕ ಅಧಿಕಾರಕ್ಕೇರಲು ಮುಂದಾಗಿದೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಆರೋಪಿಸಿದ್ದಾರೆ.

ಕೊಪ್ಪಳದಲ್ಲಿ ಇಂದು ಮಾಧ್ಯಮಗಳಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ಧರಾಮಯ್ಯ, ಅಪರೇಷನ್ ಕಮಲ ಪ್ರಜಾಪ್ರಭುತ್ವಕ್ಕೆ ಮಾರಕ. ಬಿಜೆಪಿಯವರು ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುತ್ತಾರೆ.  ತುರ್ತು ಪರಿಸ್ಥಿತಿ ಪ್ರಜಾಪ್ರಭುತ್ವದಕ್ಕೆ  ಮಾರಕ.  ಹಾಗದ್ರೆ ಬಿಜೆಪಿಯವರು ಮಾಡುತ್ತಿರುವುದು ಏನು..?  ಮಧ್ಯ ಪ್ರದೇಶದಲ್ಲಿ ಸರ್ಕಾರ ಕಿತ್ತು ಹಾಕಿದರು. ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರ ಬೀಳಿಸಿದ್ರು.  ಅಪರೇಷನ್ ಕಮಲ ಮಾಡಿದ್ದೇ ಬಿಜೆಪಿ.  ಅಪರೇಷನ್ ಕಮಲಕ್ಕೆ  ಪಾಪದ ಭ್ರಷ್ಟಾಚಾರದ ಹಣ ಬಳಸುತ್ತಿದ್ದಾರೆ ಎಂದು ಕಿಡಿಕಾರಿದರು.

ನನ್ನ ಕಂಡರೇ ಆರ್ ಎಸ್ ಎಸ್ ಗೆ ಭಯ. ಜೆಡಿಎಸ್ ಗೂ ನನ್ನ ಕಂಡರೇ ಬಯ. ಭಯದಿಂದ ನನ್ನನ್ನ ಟಾರ್ಗೆಟ್ ಮಾಡಿದ್ದಾರೆ ಎಂದು ಸಿದ್ಧರಾಮಯ್ಯ ಹೇಳಿದರು.

Key words: Maharastra-BJP-oparation kamala-Former CM-Siddaramaiah