ಗಡಿ ವಿಚಾರದಲ್ಲಿ ಗೊಂದಲ ಸೃಷ್ಠಿ: ಮಹಾರಾಷ್ಟ್ರದ ಗೊಡ್ಡು ಬೆದರಿಕೆಗೆ ನಾವು ಹೆದರಲ್ಲ- ಸಚಿವ ಆರ್.ಅಶೋಕ್ …

ಬೆಂಗಳೂರು,ಜ,1,2020(www.justkannada.in):  ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಗೊಂದಲ ಸೃಷ್ಠಿಸುತ್ತಿದೆ. ಈ ವಿಚಾರದಲ್ಲಿ ಮಹಾರಾಷ್ಟ್ರದ ಗೊಡ್ಡು ಬೆದರಿಕೆಗೆ ನಾವು ಹೆದರಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಎಚ್ಚರಿಕೆ ನೀಡಿದರು.

ಇಂದು ಬೆಂಗಳೂರಿನಲ್ಲಿ ಮಾಧ್ಯಮದ ಜತೆ ಮಾತನಾಡಿದ ಸಚಿವ ಆರ್.ಅಶೋಕ್,  ಗಡಿ ವಿಚಾರವಾಗಿ 30-40 ವರ್ಷಗಳ ಹಿಂದೆ ತೀರ್ಮಾನ ಮಾಡಲಾಗಿದೆ. ಆದರೂ, ಉದ್ಧವ್ ಠಾಕ್ರೆ ಅವರು ಹೇಳಿಕೆ ನೀಡುತ್ತಿರುವುದು ಅವರಿಗೆ ಶೋಭೆ ತರಲ್ಲ. ಕರ್ನಾಟಕದ ಒಂದೇ ಒಂದಿಂಚೂ ಜಾಗವನ್ನು ಮಹಾರಾಷ್ಟ್ರಕ್ಕೆ ಬಿಟ್ಟು ಕೊಡಲ್ಲ.  ಮಹಾರಾಷ್ಟ್ರದ ಗೊಡ್ಡು ಬೆದರಿಕೆಗೆ ನಾವು ಹೆದರಲ್ಲ. ಗೊಂದಲ ಎಬ್ಬಿಸಲು ಮಹಾರಾಷ್ಟ್ರ ಸರ್ಕಾರ ಹೊರಟಿದೆ.  ಮಹಾರಾಷ್ಟ್ರಕ್ಕೆ ಯಾವ ರೀತಿ ಉತ್ತರ ಕೊಡಬೇಕು ಆ ರೀತಿ ನಾವು ಕೊಡುತ್ತೇವೆ ಎಂದು ಟಾಂಗ್ ನೀಡಿದರು.

ಕಪಾಲಬೆಟ್ಟದಲ್ಲಿ ಯೇಸು ಪ್ರತಿಮೆ ನಿರ್ಮಾಣ ಕಾರ್ಯ ಸ್ಥಗಿತ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಆರ್. ಅಶೋಕ್,  ಕಾಮಗಾರಿಯನ್ನ ಟ್ರಸ್ಟ್ ನವರೇ ನಿಲ್ಲಿಸಿರಬಹುದು.  ಏಸು ಪ್ರತಿಮೆ ನಿರ್ಮಾಣಕ್ಕೆ ಗೋಮಾಳ ಭೂಮಿ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಬೋರ್ ವೆಲ್, ಸಂಪರ್ಕ, ರಸ್ತೆ ವ್ಯವಸ್ಥೆ ಮಾಡಲಾಗುತ್ತಿದೆ. ಇದೆಲ್ಲವೂ ಅನಧಿಕೃತ ಎಂದು ತಿಳಿಸಿದರು.

key words: maharastra- border-dispute-minister-R.ashok