ಡಾ. ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಸೋರಿಕೆ ಪ್ರಕರಣ : ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆ…

ನಾಸಿಕ್,ಏಪ್ರಿಲ್,21,2021(www.justkannada.in):  ಮಹಾರಾಷ್ಟ್ರದ ನಾಸಿಕ್ ನಲ್ಲಿರುವ ಡಾ.ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕ್ ಸೋರಿಕೆಯಿಂದಾಗಿ ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.jk

ನಾಸಿಕ್ʼನಲ್ಲಿರುವ ಡಾ. ಜಾಕಿರ್ ಹುಸೇನ್ ಎನ್ ಎಂಸಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕ್ ಸೋರಿಕೆಯಾಗಿದ್ದು, 22 ಮಂದಿ ಮೃತಪಟ್ಟಿದ್ದಾರೆ. ಆಸ್ಪತ್ರೆಯ ಹೊರಗೆ ಆಮ್ಲಜನಕ ಟ್ಯಾಂಕ್ ಸೋರಿಕೆಯಾದ ಕಾರಣ ಆ ಪ್ರದೇಶದಾದ್ಯಂತ ಅನಿಲ ಸ್ಫೋಟಗೊಂಡಿದೆ. ಹಾಗೆಯೇ, ಸೋರಿಕೆಯನ್ನು ತಪ್ಪಿಸಲು ಅಗ್ನಿಶಾಮಕ ದಳದ ತಂಡದವರು ಧಾವಿಸಿದ್ದಾರೆ.maharastra-oxygen-leak-zakir-hussain-hospital-22-deaths

ವೆಂಟಿಲೇಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 22 ಮಂದಿ ಸಾವನ್ನಪ್ಪಿದ್ದಾರೆ. ಆಕ್ಸಿಜನ್ ಸೋರಿಕೆಯಿಂದ ಆಕ್ಸಿಜನ್ ಪೂರೈಕೆಯಾಗದೇ ರೋಗಿಗಳು ಸಾವನ್ನಪ್ಪಿದ್ದಾರೆ. ಆಸ್ಪತ್ರೆಯಲ್ಲಿ ಒಟ್ಟಾರೆ 150 ರೋಗಿಗಳ ಪೈಕಿ 127 ಮಂದಿಗೆ ಆಕ್ಸಿಜನ್ ನೀಡಲಾಗುತ್ತಿತ್ತು. ಇನ್ನು ಆಸ್ಪತ್ರೆಯಲ್ಲಿದ್ದ 100 ರೋಗಿಗಳನ್ನ ಬೇರೆಡೆಗೆ ಶೀಫ್ಟ್ ಮಾಡಲಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

Key words: maharastra- Oxygen- leak – Zakir Hussain hospital- 22 deaths