ಬೆಂಗಳೂರು,ಸೆಪ್ಟಂಬರ್,27,2025 (www.justkannada.in): ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನ ನ್ಯಾಯಾಲಯ ಸೆಪ್ಟಂಬರ್ 30ಕ್ಕೆ ಮುಂದೂಡಿಕೆ ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ಕೋರ್ಟ್ ಗೆ ತಿಮರೋಡಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆಯನ್ನ ಕೋರ್ಟ್ ಸೆಪ್ಟಂಬರ್ 30 ಕ್ಕೆ ಮುಂದೂಡಿದೆ.
ಅಕ್ರಮವಾಗಿ ಎರಡು ತಲ್ವಾರ್ ಮತ್ತು ಒಂದು ಬಂದೂಕು ಪತ್ತೆ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು 3ನೇ ನೋಟಿಸ್ ಜಾರಿ ಮಾಡಿದ್ದಾರೆ. ಸೆ. 26ರಂದು ಅವರ ಮನೆಗೆ ತೆರಳಿದ ಬೆಳ್ತಂಗಡಿ ಪೊಲೀಸರು ಮೂರನೇ ನೋಟಿಸ್ ಅಂಟಿಸಿದ್ದು ಸೆ. 29 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ
ಈ ನಡುವೆ ಮಹೇಶ್ ತಿಮರೋಡಿ ಅವರನ್ನ ದಕ್ಷಿಣ ಕನ್ನಡದಿಂದ ರಾಯಚೂರಿನ ಮಾನ್ವಿಗೆ ಗಡಿಪಾರು ಮಾಡಲಾಗಿದೆ.
Key words: Hearing, Mahesh Timarodi, anticipatory bail, application, postponed