ಚಾಮರಾಜನಗರ,ಜನವರಿ,21,2026 (www.justkannada.in): ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಾಯಾತ್ರೆ ತೆರಳುವುದಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ತಾತ್ಕಾಲಿಕ ನಿರ್ಬಂಧ ವಿಧಿಸಿದ್ದಾರೆ.
ಮಂಡ್ಯದ ಚೀರನಹಳ್ಳಿಯಿಂದ 5 ಮಂದಿ ತಡರಾತ್ರಿ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದರು. ಈ ವೇಳೆ ಪ್ರವೀಣ್ ಎಂಬ ಯಾತ್ರಿಕ ಚಿರತೆ ದಾಳಿಗೆ ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಕಾಲ ಮಲೇ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಳ್ಳಲು ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ.
ಚಿರತೆಯನ್ನ ಸೆರೆ ಹಿಡಿಯ ಬೇಕಾಗಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಪಾದಯಾತ್ರೆಗೆ ನಿರ್ಬಂಧ ಹೇರಿದ್ದಾರೆ. ಇನ್ನು ಮೃತ ಪ್ರವೀಣ್ ಮೃತದೇಹ ಪತ್ತೆಯಾಗಿದೆ.
Key words: Padayatre, Male Mahadeshwara hill, temporarily, restriction







