Monday, September 28, 2026

BDA Apartments

Home Front Page ಕೋಲಾರ ಕ್ಷೇತ್ರಕ್ಕೆ ಮಲ್ಲೇಶ್ ಬಾಬು ಹೆಸರೇ ಅಂತಿಮವಲ್ಲ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.

ಕೋಲಾರ ಕ್ಷೇತ್ರಕ್ಕೆ ಮಲ್ಲೇಶ್ ಬಾಬು ಹೆಸರೇ ಅಂತಿಮವಲ್ಲ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.

ಬೆಂಗಳೂರು,ಮಾರ್ಚ್,27,2024(www.justkannada.in): ಲೋಕಸಭೆ ಚುನಾವಣೆಗೆ ಕೋಲಾರ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಪೋಟಗೊಂಡಿದ್ದು ಇದರ ಲಾಭ ಪಡೆಯಲು ಜೆಡಿಎಸ್ ಮುಂದಾಗಿದೆ.

ಈ ಮಧ್ಯೆ ಕೋಲಾರ ಕ್ಷೇತ್ರಕ್ಕೆ ಮಲ್ಲೇಶ್ ಬಾಬು ಜೆಡಿಎಸ್ ಅಭ್ಯರ್ಥಿ ಎಂದು ನಿನ್ನೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಢರು ಘೋಷಣೆ ಮಾಡಿದ್ದರು. ಆದರೆ ಈಗ ಕೋಲಾರ ಕ್ಷೇತ್ರಕ್ಕೆ ಮಲ್ಲೇಶ್ ಬಾಬು ಅವರ ಹೆಸರೇ ಅಂತಿಮವಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.ಕೋಲಾರ ಕ್ಷೇತ್ರಕ್ಕೆ ಮಲ್ಲೇಶ್ ಬಾಬು ಹೆಸರೇ ಅಂತಿಮವಲ್ಲ hdk

ಈ ಕುರಿತು ಮಾತನಾಡಿರುವ ಹೆಚ್.ಡಿ ಕುಮಾರಸ್ವಾಮಿ, ಹೆಚ್.ಡಿ ದೇವೇಗೌಡರು ತಮ್ಮ ಭಾವನೆ ಹೇಳಿದ್ದಾರೆ. ಅದೇ ಅಂತಿಮವಲ್ಲ. ಕೋಲಾರ ರಾಜಕೀಯವನ್ನ ಸೂಕ್ಷ್ಮವಾಗಿ ಗಮನಿಸಿದ್ದೇನೆ. ಕಾಂಗ್ರೆಸ್ ಬೆಳವಣಿಗೆ ನೋಡಿ ನಮ್ಮ ಅಭ್ಯರ್ಥಿ ಘೋಷಣೆ ಮಾಡುತ್ತೇವೆ. ಇವತ್ತು ಸಂಜೆ ಒಳಗೆ ಟಿಕೆಟ್ ಘೋಷಣೆ ಮಾಡುತ್ತೇವೆ ಎಂದು ಹೇಳಿದರು.

Key words: Mallesh Babu, Kolar, HD Kumaraswamy.