ಬೆಂಗಳೂರು,ಮೇ,1,2025 (www.justkannada.in): ದೇಶಾದ್ಯಂತ ಜಾತಿಗಣತಿ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು ಇದನ್ನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ವಾಗತಿಸಿದ್ದಾರೆ.
ಈ ಕುರಿತು ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ದೇಶದಲ್ಲಿ ಜಾತಿಗಣತಿಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಅದನ್ನು ಸ್ವಾಗತಿಸುತ್ತೇನೆ. ಕಾಂಗ್ರೆ ಸ್ ಒತ್ತಾಯದಿಂದ ಜಾತಿಗಣತಿ ಆಗುತ್ತಿದೆ. ಜನಗಣತಿಯಿಂದ ದೇಶಕ್ಕೆ ಒಳ್ಳೆಯದಾಗುತ್ತದೆ ಎಂದರು.
ನಿನ್ನೆ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಕ್ಯಾಬಿನೆಟ್ ಸಭೆಯಲ್ಲಿ ಜನಗಣತಿ ಜೊತೆಗೆ ಜಾತಿಗಣತಿ ಮಾಡುವುದಕ್ಕೆ ನಿರ್ಧಾರ ಮಾಡಿದ್ದು ಸಭೆ ಬಳಿಕ ಕೇಂದ್ರ ಸಚವಿ ಅಶ್ವಿನಿ ವೈಷ್ಣವ್ ಈ ಬಗ್ಗೆ ಘೋಷಣೆ ಮಾಡಿದ್ದರು.
Key words: Central Government, decision, caste census, Mallikarjun Kharge