ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು: ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಅಕ್ಟೋಬರ್,1,2025 (www.justkannada.in): ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮಲ್ಲಿಕಾರ್ಜುನ ಖರ್ಗೆ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ ಎನ್ನಲಾಗಿದ್ದು,  ಬೆಂಗಳೂರಿನ ಎಂ ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಖರ್ಗೆ ಅವರ ಆರೋಗ್ಯ ವಿಚಾರಿಸಿದ್ದಾರೆ.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಅವರು ಆರೋಗ್ಯವಾಗಿ ಇದ್ದಾರೆ.  ಚೆನ್ನಾಗಿ ಮಾತನಾಡುತ್ತಿದ್ದಾರೆ  ಎಂದರು.

Key words: Mallikarjun Kharge, admitted, hospital, CM Siddaramaiah