Wednesday, July 29, 2026

BDA Apartments

Home Front Page ಎಐಸಿಸಿ ಅಧ್ಯಕ್ಷರಾಗಿ ಒಂದು ವರ್ಷ ಪೂರೈಸಿದ ಮಲ್ಲಿಕಾರ್ಜುನ ಖರ್ಗೆ

ಎಐಸಿಸಿ ಅಧ್ಯಕ್ಷರಾಗಿ ಒಂದು ವರ್ಷ ಪೂರೈಸಿದ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು, ಅಕ್ಟೋಬರ್ 27, 2023 (www.justkannada.in): ಕಾಂಗ್ರೆಸ್ ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವದಲ್ಲಿ ಮಹತ್ವದ ಪ್ರಗತಿ ಸಾಧಿಸಿದೆ ಎಂದು ಎಐಸಿಸಿ ಹೇಳಿದೆ.

ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಒಂದು ವರ್ಷ ಪೂರೈಸಿದ್ದಾರೆ.  ಹೀಗಾಗಿ ಖರ್ಗೆ ಅವರ ಕುರಿತು ಕಾಂಗ್ರೆ್ಸ್ ಮೆಚ್ಚುಗೆಯ ಮಾತುಗಳನ್ನಾಡಿದೆ.

ಕಳೆದ ವರ್ಷ ಅಕ್ಟೋಬರ್ 26ರಂದು ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು.

ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವದಲ್ಲಿ ಮಹತ್ವದ ಪ್ರಗತಿ ಸಾಧಿಸಿದೆ. ಅಲ್ಲದೇ ಸಂಘಟನೆಯನ್ನು ಪುನಶ್ಚೇತನಗೊಳಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.

ಉತ್ಸಾಹ ಮತ್ತು ಪರಿಶ್ರಮದಿಂದ ಏನನ್ನೂ ಸಾಧಿಸಬಹುದು ಎಂಬುದಕ್ಕೆ ಖರ್ಗೆ ಅವರು ಉದಾಹರಣೆ ಏಂದು ಪಕ್ಷದ ವರಿಷ್ಠರು ಮೆಚ್ಚುಗೆಯ  ಮಾತುಗಳನ್ನಾಡಿದ್ದಾರೆ.