ಕಲಬುರಗಿ,ಏಪ್ರಿಲ್,16,2025 (www.justkannada.in): ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕ ಕಾಂಗ್ರೆಸ್ ಸರ್ಕಾರವನ್ನು ಕೆಡುವಲು ಪ್ಲಾನ್ ರೂಪಿಸಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.
ಕಲಬುರಗಿಯಲ್ಲಿ ನಡೆದ ವಿಭಾಗ ಮಟ್ಟದ ಉದ್ಯೋಗ ಮೇಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಎಲ್ಲೆಲ್ಲಿ ಕಾಂಗ್ರೆಸ್ ಸರ್ಕಾರ ಇದೆಯೋ ಅದನ್ನು ಕೆಡವಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಪ್ಲಾನ್ ಮಾಡಿದ್ದಾರೆ. ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರ ತೆಗೆಯಲು ಪ್ಲ್ಯಾನ್ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ನಿಮ್ಮ ಸರ್ಕಾರವನ್ನು ಬೀಳಿಸುತ್ತಾರೆ ಎಚ್ಚರದಿಂದಿರಿ ಎಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಗೆ ತಿಳಿಸಿದ್ದಾರೆ.
ನಿಮ್ಮಲ್ಲಿ ಏನೇ ಮನಸ್ತಾಪ ಇದ್ದರೂ ಒಗ್ಗಟ್ಟಾಗಿರಬೇಕು. ನೀವು ಹುಷಾರಾಗಿರಬೇಕು. ನಿಮ್ಮಲ್ಲಿ ಯಾವುದೇ ಬೇಧ ಭಾವ ಆಗಿರಲಿ ಒಂದಾಗಿರಬೇಕು ಇಲ್ಲವಾದರೆ ಮೋದಿಯವರು ಸರ್ಕಾರ ತೆಗೆದು ಹಾಕುತ್ತಾರೆ ಎಂದು ವೇದಿಕೆ ಮೇಲಿದ್ದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ ನೀಡಿದರು.
Key words: PM, Modi, Amit Sha, Karnataka Government, Mallikarjuna Kharge