Monday, September 21, 2026

BDA Apartments

Home Front Page ಇಂಡಿಯಾ ಮೈತ್ರಿಕೂಟ ಸಭೆ: ಪ್ರಧಾನಿ ಅಭ್ಯರ್ಥಿಗೆ ಮಲ್ಲಿಕಾರ್ಜುನ ಖರ್ಗೆ ಹೆಸರು ಪ್ರಸ್ತಾಪ.

ಇಂಡಿಯಾ ಮೈತ್ರಿಕೂಟ ಸಭೆ: ಪ್ರಧಾನಿ ಅಭ್ಯರ್ಥಿಗೆ ಮಲ್ಲಿಕಾರ್ಜುನ ಖರ್ಗೆ ಹೆಸರು ಪ್ರಸ್ತಾಪ.

ನವದೆಹಲಿ,ಡಿಸೆಂಬರ್,19,2023(www.justkannada.in):  ಮುಂದಿನ ಲೋಕಸಭಾ ಚುನಾವಣೆಗೆ ಈಗಿನಿಂದಲೇ ತಯಾರಿ ನಡೆಸುತ್ತಿದ್ದು ಈ ಮಧ್ಯೆ ಇಂದು ನವದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟ ನಾಯಕರ ಸಭೆ ನಡೆಯಿತು.

ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಅಭ್ಯರ್ಥಿಯಾಗಲಿ ಎಂದು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನವದೆಹಲಿಯ ಖಾಸಗಿ ಹೋಟೆಲ್ ನಲ್ಲಿ ಇಂಡಿಯಾ ಮೈತ್ರಿಕೂಟದ ಸಭೆ ನಡೆದಿದ್ದು,  ಮೈತ್ರಿಕೂಟ ಸ್ಥಾಪನೆಯಾದ ಬಳಿಕ 4ನೇ ಬಾರಿಗೆ ನಡೆದ ಸಭೆ ಇದಾಗಿದೆ. ಇನ್ನು ಮಮತಾ ಬ್ಯಾನರ್ಜಿ ಅವರ ಅಭಿಪ್ರಾಯಕ್ಕೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಸಹ ಸಹಮತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.ಇಂಡಿಯಾ ಮೈತ್ರಿಕೂಟ ಸಭೆ mallikarjun kharge

ಆದರೆ ಈ ಕುರಿತು ಪ್ರತಿಕ್ರಿಯಿಸಿರುವ ಮಲ್ಲಿಕಾರ್ಜುನ ಖರ್ಗೆ, ಮೊದಲು ನಾವು ಗೆಲ್ಲೋಣ ನಂತರ ಪ್ರಧಾನಿ ಅಭ್ಯರ್ಥಿ ಬಗ್ಗೆ ತೀರ್ಮಾನಿಸೋಣ ಎಂದು ತಿಳಿಸಿದ್ದಾರೆ. ಕಳೆದ ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿಯಾಗಿದ್ದರು.

Key words: Mallikarjuna Kharge -prime ministerial- candidate -west Bengal -CM Mamata Banerjee