ಮಲ್ಲಿಕಾರ್ಜುನ ಖರ್ಗೆಗೆ ರಾಜ್ಯಸಭೆ ಟಿಕೆಟ್ : ಎಐಸಿಸಿಯಿಂದ ಅಧಿಕೃತ ಘೋಷಣೆ….

ಬೆಂಗಳೂರು,ಜೂ,5,2020(www.justkannada.in):  ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ನಿಂದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಟಿಕೆಟ್ ನೀಡಲಾಗಿದೆ.

ಈ ಬಗ್ಗೆ ಎಐಸಿಸಿ ಅಧಿಕೃತ ಪ್ರಕಟಣೆ ಹೊರಡಿಸಿದೆ. ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ನಿಂದ ಮಲ್ಲಿಕಾರ್ಜುನ ಖರ್ಗೆ ಅವರು ಸ್ಪರ್ಧಿಸಲಿದ್ದಾರೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.  ರಾಜ್ಯಸಭೆಗೆ ಆಯ್ಕೆ ಮೂಲಕ  ಮಲ್ಲಿಕಾರ್ಜುನ ಖರ್ಗೆ ಸಂಸತ್ ಗೆ ಪ್ರವೇಶಿಸಲು ಸಜ್ಜಾಗಿದ್ದಾರೆ. Mallikarjuna kharge- rajyashaba- ticket- Official announcement - AICC

ರಾಜ್ಯಸಭೆ ನಾಲ್ಕು ಸ್ಥಾನಗಳ ಪೈಕಿ ಒಂದು ಸ್ಥಾನದಲ್ಲಿ ಕಾಂಗ್ರೆಸ್ ಸುಲಭವಾಗಿ ಗೆಲ್ಲಲಿದೆ. ಹೀಗಾಗಿ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆಗೆ ಆಯ್ಕೆಯಾಗುವ ಸಾಧ್ಯತೆ ಇದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗ ಅವರು ಕಲ್ಬುರ್ಗಿ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು.

Key words: Mallikarjuna kharge- rajyashaba- ticket- Official announcement – AICC