ಸಚಿವ ಕೆ.ಜೆ ಜಾರ್ಜ್ ವಿರುದ್ದ ಪೋಸ್ಟ್ ಹರಿಬಿಟ್ಟ ವ್ಯಕ್ತಿ ಬಂಧನ.

ಬೆಂಗಳೂರು, ಡಿಸೆಂಬರ್,16,2023(www.justkannada.in):  ತೆಲಂಗಾಣ ವಿಧಾನಸಭೆ ಚುನಾವಣೆ ವೇಳೆ ಇಂಧನ ಸಚಿವ ಕೆ.ಜೆ ಜಾರ್ಜ್ ವಿರುದ್ದ  ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹರಿಬಿಟ್ಟ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ತೆಲಂಗಾಣದ ಕರೀಂನಗರದ ನಿವಾಸಿ ರವಿಕಾಂತ ಶರ್ಮಾ(33) ಬಂಧಿತ ಆರೋಪಿ. ರವಿಕಾಂತಶರ್ಮಾ ತೆಲಂಗಾಣದ ಬಿಆರ್ ​ಎಸ್ ಪಾರ್ಟಿಯ ಐಟಿ ಸೆಲ್ ಉದ್ಯೋಗಿಯಾಗಿದ್ದಾರೆ ಎನ್ನಲಾಗಿದೆ, ಈ ನಡುವೆ ತೆಲಂಗಾಣ ವಿಧಾನಸಭೆ ಚುನಾವಣೆ ವೇಳೆ ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಆರೋಪಿ ರವಿಕಾಂತ ಶರ್ಮಾ ಪೋಸ್ಟ್ ಹರಿಬಿಟ್ಟಿದ್ದರು.

ಕರ್ನಾಟಕದ ವಿದ್ಯುತ್ ಪರಿಸ್ಥಿತಿ ಮತ್ತು ಗೃಹಜ್ಯೋತಿ ಯೋಜನೆ ಬಗ್ಗೆ ನಕಲಿ ಆಡಿಯೋ ಕ್ಲಿಪ್​ವೊಂದನ್ನ ಶೇರ್ ಮಾಡಿ ಪೋಸ್ಟ್ ಹರಿಬಿಟ್ಟಿದ್ದರು ಎನ್ನಲಾಗಿದೆ. ಈ ಸಂಬಂಧ ಪೂರ್ವ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Key words: Man- arrested – posting- against –Minister- KJ George