ಮಳೆಯಿಂದ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ವ್ಯಕ್ತಿ ಸಾವು

ಮೈಸೂರು,ಮೇ,26,2025 (www.justkannada.in): ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಎಚಗಳ್ಳಿ ಗ್ರಾಮದಲ್ಲಿ ನಡೆದಿದೆ.

ಸಿದ್ದರಾಜು 50 ಮೃತಪಟ್ಟ ವ್ಯಕ್ತಿ. ನಿನ್ನೆ ಸಂಜೆ ಸಿದ್ದರಾಜು ಹಸು ಮೇಯಿಸಿಕೊಂಡು ಬರುವಾಗ ಈ ದುರ್ಘಟನೆ ಸಂಭವಿಸಿದೆ ಮಳೆಯಿಂದಾಗಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ಹಸು ಜೊತೆಗೆ  ಸಿದ್ದರಾಜು ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಸೆಸ್ಕ್ ಅಧಿಕಾರಿಗಳು ಭೇಟಿ ನೀಡಿದ್ದು, ಈ ಕುರಿತು ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Man, dies, power, fell , rain, mysore