ಮಂಡ್ಯ,ಡಿಸೆಂಬರ್,27,2025 (www.justannada.in): ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿಯ ಮೈಸೂರು ಬೆಂಗಳೂರು ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಕಾರು ಚಾಲಕ ಗೋವಿಂದರಾಜು ಹಾಗೂ ಅಶೋಕ್ ಮೃತಪಟ್ಟವರು.
ಘಟನೆಯಲ್ಲಿ ಮತ್ತೊಬ್ಬ ವ್ಯಕ್ತಿಗೆ ಗಂಭೀರಗಾಯವಾಗಿದ್ದು ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Key words: Mandya, Two death, car, lorry, Accident







