ಮಂಡ್ಯ ಲೋಕಸಭಾ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ನಾಮಪತ್ರ ಸಲ್ಲಿಕೆ.

ಮಂಡ್ಯ,ಏಪ್ರಿಲ್,1,2024 (www.justkannada.in): ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ವೆಂಕಟರಮಣೇಗೌಡ (ಸ್ವಾರ್ ಚಂದ್ರು) ಅವರು ನಾಮಪತ್ರ ಸಲ್ಲಿಕೆ ಮಾಡಿದರು.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವೆಂಕಟರಮಣೇಗೌಡ ಅವರು ಇಂದು ಚುನಾವಣಾಧಿಕಾರಿ ಡಾ.ಕುಮಾರ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದರು. ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಎನ್. ಚೆಲುವರಾಯಸ್ವಾಮಿ, ಶಾಸಕ ನರೇಂದ್ರಸ್ವಾಮಿ ಸೇರಿ ಮತ್ತಿತರರು ಉಪಸ್ಥಿತರಿದ್ದರು.

ನಾಮಪತ್ರ ಸಲ್ಲಿಕೆಗೂ ಮುನ್ನಾ  ಸ್ಟಾರ್ ಚಂದ್ರು ಅವರು ಶ್ರೀ ಆದಿ ಚುಂಚನಗಿರಿ ಮಠದಲ್ಲಿ ಶ್ರೀ ಕಾಲ ಭೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವಾದ ಪಡೆದರು.

ನಂತರ ಮಂಡ್ಯ ನಗರದ ಶಕ್ತಿ ದೇವತೆ ಶ್ರೀ ಕಾಳಿಕಾಂಬ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ತೆರೆದ ವಾಹನದಲ್ಲಿ ಶ್ರೀ ಕಾಳಿಕಾಂಬ ದೇವಸ್ಥಾನದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೃಹತ್ ಮೆರವಣಿಗೆ ಮಾಡುವ ಮೂಲಕ ಕಾಂಗ್ರೇಸ್ ಅಭ್ಯರ್ಥಿ ಸ್ವಾರ್ ಚಂದ್ರು  ತಮ್ಮ ಶಕ್ತಿ ಪ್ರದರ್ಶನ ಮಾಡಿದರು.

Key words: Mandya, Congress, candidate