ಮಂಡ್ಯ ಹನುಮ ಧ್ವಜ ವಿವಾದ: ಬಿಜೆಪಿ, ಜೆಡಿಎಸ್ ಈ ಷಡ್ಯಂತ್ರದ ರೂವಾರಿ- ಸಚಿವ ದಿನೇಶ್ ಗುಂಡೂರಾವ್.

ಬೆಂಗಳೂರು,ಜನವರಿ,30,2024(www.justkannada.in):  ಮಂಡ್ಯ ತಾಲ್ಲೂಕಿನ ಕೆರೆಗೋಡು ಗ್ರಾಮದಲ್ಲಿ ಹನುಮ ಧ್ವಜ ವಿವಾದ ಸಂಬಂಧ ಪ್ರತಿಕ್ರಿಯಿಸಿರುವ  ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬಿಜೆಪಿ, ಜೆಡಿಎಸ್ ಈ ಷಡ್ಯಂತ್ರದ ರೂವಾರಿ ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಕೆರಗೋಡು ಧ್ವಜ ತೆರವು ಪ್ರಕರಣದ ಹಿಂದೆ ಜಿಲ್ಲೆಯ ಶಾಂತಿ ಕದಡುವ ದುರುದ್ದೇಶವಿದೆ. ಕೆರಗೋಡು ಗ್ರಾಮದಲ್ಲಿ ನಿರ್ಮಾಣವಾಗಿದ್ದ ಧ್ವಜ ಸ್ತಂಭದಲ್ಲಿ ಕರ್ನಾಟಕದ ಧ್ವಜ ಹಾಗೂ ರಾಷ್ಟ್ರಧ್ವಜ ಹಾರಾಟಕ್ಕೆ ಮಾತ್ರ ಅನುಮತಿ ಇದೆ. ಗ್ರಾಮ ಪಂಚಾಯತಿ ಸಭೆಯಲ್ಲೂ ಇದು ಪ್ರಸ್ತಾಪವಾಗಿದೆ. ಹೀಗಿದ್ದೂ ಧಾರ್ಮಿಕ ಧ್ವಜ ಹಾರಿಸುವ ಹಿಂದಿನ ಹುನ್ನಾರ. ಬಿಜೆಪಿ ಜೆಡಿಎಸ್ ನಿಂದ ಜಿಲ್ಲೆಯಲ್ಲಿ ಅಶಾಂತಿ ಸೃಷ್ಟಿಸುವ ಒಂದು ಷಡ್ಯಂತ್ರ ಎಂದು ಕಿಡಿಕಾರಿದರು.

ಜಾತ್ಯಾತೀತೆಯ ಲೇಬಲ್ ಅಂಟಿಸಿಕೊಂಡಿದ್ದ ಜೆಡಿಎಸ್ ಈಗ BJP ಜೊತೆ ಸೇರಿ ಮಂಡ್ಯದ ವಾತಾವರಣ ಹಾಳುಮಾಡುತ್ತಿರುವುದು ವಿಪರ್ಯಾಸ. ಕೋಮು ಸಾಮರಸ್ಯಕ್ಕೆ ಹೆಸರಾಗಿದ್ದ ಮಂಡ್ಯದ ಜನತೆ ಬಿಜೆಪಿ ಜೆಡಿಎಸ್ ಸಂಚನ್ನು ಅರಿಯಬೇಕು  ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

Key words: Mandya-Hanuma Flag –Controversy- BJP -JDS -Minister -Dinesh Gundurao.