ಸಂಸದೆ ಸುಮಲತಾ ಅಂಬರೀಶ್ ನಿರ್ಧಾರ ಸ್ವಾಗತಿಸಿದ ಹೆಚ್.ಡಿಕೆ.

ಮಂಡ್ಯ,ಏಪ್ರಿಲ್, 3, 2024 (www.justkannada.in): ಈ ಬಾರಿ ಲೋಕಸಭಾ ಚುನಾವಣೆ ಸ್ಪರ್ಧೆಯಿಂದ ಸಂಸದೆ ಸುಮಲತಾ ಅಂಬರೀಶ್ ಹಿಂದೆ ಸರಿದು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿಗೆ ಬೆಂಬಲ ಸೂಚಿಸಿದ್ದು ಶೀಘ್ರದಲ್ಲೇ ಬಿಜೆಪಿ ಸೇರುವುದಾಗಿ ತಿಳಿಸಿದ್ದಾರೆ.

ಸಂಸದೆ ಸುಮಲತಾ ಅಂಬರೀಶ್ ಅವರ ನಿರ್ಧಾರವನ್ನ ಮೈತ್ರಿ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ ಸ್ವಾಗತಿಸಿದ್ದಾರೆ. ಈ ಕುರಿತು ಮಾತನಾಡಿರುವ ಹೆಚ್.ಡಿಕೆ,   ಸುಮಲತಾ ಅಂಬರೀಶ್ ಅವರ ನಿರ್ಧಾರವನ್ನ ಸ್ವಾಗತಿಸುತ್ತೇನೆ. ಬಿಜೆಪಿಗೆ ಬೆಂಬಲ ನೀಡಿದರೇ ನನಗೂ ಬೆಂಬಲ ನೀಡಿದಂತೆ. ಸುಮಲತಾ ಅವರನ್ನ ಪ್ರಚಾರಕ್ಕೂ ಕರೆಯುವೆ.  ನಾಳೆ ಬೆಳಿಗ್ಗೆ 11 ಗಂಟೆಗೆ ಮಂಡ್ಯ ಮೈತ್ರಿ  ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡುತ್ತೇನೆ ಎಂದು ತಿಳಿಸಿದರು.

Key words: mandya, HD Kumaraswamy, Sumalatha Ambarish