Tuesday, August 25, 2026

BDA Apartments

Home Front Page ಕಾವೇರಿ ನದಿ ಪಾತ್ರ ಭೇಟಿ ನಿಷೇಧಿಸಿ ಆದೇಶ.

ಕಾವೇರಿ ನದಿ ಪಾತ್ರ ಭೇಟಿ ನಿಷೇಧಿಸಿ ಆದೇಶ.

ಮಂಡ್ಯ,ಜುಲೈ,31,2024 (www.justkannada.in):  ಕೆ.ಆರ್.ಎಸ್ ಜಲಾಶಯದಿಂದ 1,70,000 ಕ್ಯೂಸೆಕ್ಸ್ ಹೊರಹರಿವು (Out flow) ನೀರನ್ನು ಬಿಡಲಾಗುತ್ತಿದೆ. ಹೀಗಾಗಿ ನದಿಪಾತ್ರದಲ್ಲಿ ಮತ್ತು ಸೇತುವೆ ಇನ್ನಿತರ ಪ್ರೇಕ್ಷಣಿಯ ಸ್ಥಳಗಳಿಗೆ ಭೇಟಿ ನೀಡುವುದು, ನೀರಿನಲ್ಲಿ ಈಜುವುದು ಹಾಗೂ ಸೆಲ್ಫಿ ತೆಗೆಯುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ಆದೇಶ ಹೊರಡಿಸಿದ್ದಾರೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜಸಾಗರ ಜಲಾಶಯಕ್ಕೆ ಒಳಹರಿವು ಪ್ರಮಾಣ ಹೆಚ್ಚಾಗುತಿದೆ. ಜುಲೈ 31 ರಂದು ಸಂಜೆ 5 ಗಂಟೆಗೆ ಕೆ.ಆರ್.ಎಸ್ ಜಲಾಶಯದಿಂದ 1,70,000 ಕ್ಯೂಸೆಕ್ಸ್ ಹೊರಹರಿವು (Out flow) ನೀರನ್ನು ಬಿಡಲಾಗುತ್ತಿದೆ. ಕಾವೇರಿ ನದಿ ಪಾತ್ರ ಭೇಟಿ ನಿಷೇಧಿಸಿ  ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ಆದೇಶ ಹೊರಡಿಸಿದ್ದಾರೆ.

ಕಾವೇರಿ ನದಿ ಪಾತ್ರದಲ್ಲಿನ ಸಾರ್ವಜನಿಕರು ಸ್ವಯಂ ಮುಂಜಾಗ್ರತೆ ವಹಿಸುವುದು. ಕಾವೇರಿ ನದಿ ಪಾತ್ರಕ್ಕೆ ಅಥವಾ ತಗ್ಗು ಪ್ರದೇಶಗಳಿಗೆ ಭೇಟಿ ನೀಡುವುದನ್ನು ಕಡ್ಡಾಯವಾಗಿ ನಿಷೇದಿಸುವುದು. ನದಿಪಾತ್ರದಲ್ಲಿ ಮತ್ತು ತಗ್ಗು ಪ್ರದೇಶಗಳಲ್ಲಿರುವ ರೈತರು ಕೃಷಿ ಚಟುವಟಿಕೆಗಳಿಗೆ ಹೋಗದಂತೆ ಹಾಗೂ ಜಾನುವಾರುಗಳನ್ನು ಬಿಡದಿರಲು ಸೂಚಿಸಿದೆ.

ತಾಲ್ಲೂಕು ಆಡಳಿತದ ವತಿಯಿಂದ ಈಗಾಗಲೇ ಮುನ್ನೆಚ್ಚರಿಕಾ ಕ್ರಮವಾಗಿ ಕೈಗೊಂಡಿರುವ ವ್ಯಾಪಕ ಪ್ರಚಾರಗಳನ್ನು ಹಾಗೂ ಅಪಾಯಕಾರಿ ಸ್ಥಳಗಳಲ್ಲಿ ಅಳವಡಿಸಿರುವ ಸೂಚನಾ ಫಲಕಗಳನ್ನು ಗಮನಿಸಬೇಕೆಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಡಾ. ಕುಮಾರ ರವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Key words: Mandya, KRS Reservoir, ban, visit, Kaveri river