ಸಚಿವದ್ವಯರಿಂದ ಮೈ ಶುಗರ್ ಸಕ್ಕರೆ ಕಾರ್ಖಾನೆಗೆ ಭೇಟಿ: ಪರಿಶೀಲನೆ…

ಮಂಡ್ಯ,ಜೂ,10,2020(www.justkannada.in): ಮಂಡ್ಯ ಜಿಲ್ಲೆಯ  ಮೈ ಶುಗರ್ ಸಕ್ಕರೆ ಕಾರ್ಖಾನೆಗೆ ಸಕ್ಕರೆ ಸಚಿವ ಶಿವರಾಮ್ ಹೆಬ್ಬಾರ್ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ| ನಾರಾಯಣಗೌಡ ಅವರು ಭೇಟಿ ನೀಡಿ  ಪರಿಶೀಲನೆ ನಡೆಸಿದರು.

ಮೈ ಶುಗರ್ ಸಕ್ಕರೆ ಕಾರ್ಖಾನೆಗೆ ಸಚಿವದ್ವಯರ ಭೇಟಿ ಪರಿಶೀಲನೆ ವೇಳೆ ಸಂಸದೆ ಸುಮಲತಾ ಅಂಬರೀಷ್ ಹಾಗೂ ಸ್ಥಳೀಯ ಶಾಸಕರು, ವಿಧಾನಪರಿಷತ್ ಸದಸ್ಯರು ಉಪಸ್ಥಿತರಿದ್ದರು.mandya-minister-narayana-gowda-shivaram-hebbar-visited-my-sugar-sugar-factory

ಅಪಘಾತಕ್ಕೀಡಾದ ಮಹಿಳೆಯ ನೆರವಿಗೆ ಧಾವಿಸಿ ಮಾನವೀಯತೆ ಮೆರೆದ ಸಚಿವ ನಾರಾಯಣಗೌಡ….

ಶ್ರೀರಂಗಪಟ್ಟಣ ತಾಲೂಕಿನ ಟಿ ಎಮ್ ಹೊಸೂರು ಬಳಿ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಮಹಿಳೆಯ ನೆರವಿಗೆ ಆಗಮಿಸುವ ಮೂಲಕ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ಅವರು ಮಾನವೀಯತೆ ಮೆರೆದಿದ್ದಾರೆ.  ಸಚಿವ ನಾರಾಯಣಗೌಡ ಅವರು ಮಂಡ್ಯದಿಂದ ಪಾಂಡವಪುರಕ್ಕೆ ತೆರಳುತ್ತಿದ್ದ  ವೇಳೆ ಘಟನೆ ನಡೆದ ವಿಚಾರ ತಿಳಿದು ವಾಹನ ನಿಲ್ಲಿಸಿ ವಿಚಾರಿಸಿದ್ದಾರೆ. ತಕ್ಷಣವೇ ತಮ್ಮ ಬೆಂಗಾವಲು ವಾಹನದಲ್ಲಿ ಗಾಯಾಳು ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಎರಡು ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಮಹಿಳೆ ತೀವ್ರ ಗಾಯಗೊಂಡಿದ್ದರು.

Key words: mandya-Minister- narayana gowda- shivaram hebbar-visited -My Sugar Sugar Factory