Saturday, October 10, 2026

BDA Apartments

Increase in COVID cases: DC’s village stay program with held BDA JK_Adv BDA Adv
Home Front Page ಕೇಂದ್ರ ಸಚಿವ ಸುರೇಶ್ ಅಂಗಡಿ ಭೇಟಿ ಮಾಡಿ ಮನವಿ ಸಲ್ಲಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್….

ಕೇಂದ್ರ ಸಚಿವ ಸುರೇಶ್ ಅಂಗಡಿ ಭೇಟಿ ಮಾಡಿ ಮನವಿ ಸಲ್ಲಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್….

ಮಂಡ್ಯ,ಡಿ,14,2019(www.justkannada.in):  ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರು ಕೇಂದ್ರ ರೈಲ್ವೆ ಸಚಿವ ಶ್ರೀ ಸುರೇಶ್ ಅಂಗಡಿ ಅವರನ್ನು ಭೇಟಿ ಮಾಡಿ ರೈಲ್ವೆ ಹಳಿಗೆ ಅಡ್ಡಲಾಗಿ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಅನುಷ್ಠಾನ ಮಾಡುವಂತೆ ಮನವಿ ಸಲ್ಲಿಸಿದರು.

ಮಂಡ್ಯ ನಗರದ ಹೃದಯಭಾಗವಾದ ಮಹಾವೀರ್ ಸರ್ಕಲ್ ನಿಂದ ಮಾರುಕಟ್ಟೆ ಹಾಗೂ ಜೈನ್ ರಸ್ತೆಗೆ ಸಂಪರ್ಕ ಕಲ್ಪಿಸುವ ಕಾಮಗಾರಿಯಾಗಿದ್ದು, ಸುಮಾರು ಎಂಟು ವರ್ಷಗಳಿಂದ ರಸ್ತೆ ಸಂಪರ್ಕ ಕಾಮಗಾರಿ ನೆನೆಗುದಿಗೆ ಬಿದ್ದಿದೆ.

ಹೀಗಾಗಿ ಕೇಂದ್ರ ರೈಲ್ವೆ ಸಚಿವ ಸುರೇಶ್ ಅಂಗಡಿ ಅವರನ್ನ ಭೇಟಿಯಾದ ಸಂಸದೆ ಸುಮಲತಾ ಅಂಬರೀಶ್,  ರೈಲ್ವೆ ಹಳಿಗೆ ಅಡ್ಡಲಾಗಿ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಅನುಷ್ಠಾನ ಮಾಡಬೇಕು. ಇದಕ್ಕೆ ಈ ಬಾರಿಯ ಬಜೆಟ್ ನಲ್ಲಿ ಅನುದಾನ ಬಿಡುಗಡೆಗೊಳಿಸಬೇಕು ಎಂದು ಮನವಿ ಮಾಡಿದರು

Key words: mandya- MP- Sumalatha Ambarish-appealed – Union Minister- Suresh Angadi