ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ದುರಂತ: ಲೈನ್ ಮೆನ್ ಸಾವು…

ಮಂಡ್ಯ,ಜೂ,9,2020(www.justkannada.in): ಕರ್ತವ್ಯ ನಿರ್ವಹಿಸುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಲೈನ್ ಮನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಹೊನಗಾನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಲೋಕೇಶ್ (25) ಮೃತಪಟ್ಟ ಲೈನ್ ಮೆನ್. ಗುತ್ತಿಗೆ ಆಧಾರಿತ ನೌಕರ ದಿನೇಶ್ (24) ಗಂಭೀರವಾಗಿ ಗಾಯಗೊಂಡಿದ್ದಾರೆ.mandya-pandavapura-linemen-death-duty

ಟ್ರಾನ್ಸ್ ಫಾರ್ಮರ್ ದುರಸ್ಥಿ ವೇಳೆ ದಿಢೀರ್ ವಿದ್ಯುತ್ ಪ್ರಸಾರವಾಗಿ ಈ ಘಟನೆ ಸಂಭವಿಸಿದೆ. ಟ್ರಾನ್ಸ್ ಫಾರ್ಮರ್ ರಿಪೇರಿ ಮಾಡುತ್ತಿರುವ ಮಾಹಿತಿ ನೀಡಿದ್ದರೂ ನಿರ್ಲಕ್ಷಿಸಿ ವಿದ್ಯುತ್ ವಿತರಣಾ ಕೇಂದ್ರದ ಸಿಬ್ಬಂದಿ ವಿದ್ಯುತ್ ಮೀಟರ್ ಆನ್ ಮಾಡಿದ್ದಾರೆ. ಈ ವೇಳೆ ವಿದ್ಯುತ್ ಸ್ಪರ್ಶವಾಗಿ ಲೋಕೇಶ್ ಸ್ಥಳದಲ್ಲೇ ಮೃತಪಟ್ಟಿದ್ದು ದಿನೇಶ್ ಗಂಭೀರ ಗಾಯಗೊಂಡಿದ್ದಾರೆ

ಘಟನೆ ನಡೆದು ಒಂದೂವರೆಗೆ ಗಂಟೆಯಾದ್ರೂ ಕೂಡ ಸೆಸ್ಕ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಚಿನಕುರುಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Key words: mandya- pandavapura- linemen-death- duty