ನಟ ದರ್ಶನ್ ವಿರುದ್ದ ಮಂಡ್ಯದಲ್ಲಿ ರೈತರಿಂದ ಪ್ರತಿಭಟನೆ: ಎಲ್ಲಾ ಆರೋಪಿಗಳಿಗೆ ಗಲ್ಲುಶಿಕ್ಷೆಗೆ ಆಗ್ರಹ.

ಮಂಡ್ಯ,ಜೂನ್,13,2024 (www.justkannada.in): ರೇಣುಕಾಸ್ವಾಮಿ  ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್‌ ವಿರುದ್ದ ಮಂಡ್ಯದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಯಿತು.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆಳತಿ ಪವಿತ್ರಗೌಡ ಸೇರಿ 13 ಮಂದಿ ಬಂಧನವಾಗಿದ್ದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್‌ ಖಂಡಿಸಿ ನಟ ದರ್ಶನ್ ವಿರುದ್ದ ಮಂಡ್ಯದಲ್ಲಿ ರೈತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಮಂಡ್ಯದ ಸಂಜಯ್ ವೃತ್ತದಿಂದ ವಿಶ್ವೇಶ್ವರಯ್ಯ ಪ್ರತಿಮೆವರೆಗೆ ಕರ್ನಾಟಕ ರಾಜ್ಯ ರೈತ ಸಂಘ ರ‍್ಯಾಲಿ ನಡೆಸಿ ಆಕ್ರೋಶ ಹೊರಹಾಕಿತು. ದರ್ಶನ್ ಸೇರಿ ಎಲ್ಲ ಆರೋಪಿಗಳಿಗೂ ಗಲ್ಲು ಶಿಕ್ಷೆ ವಿಧಿಸಲು ಪ್ರತಿಭಟನಾನಿರತ ರೈತರು ಆಗ್ರಹಿಸಿದರು.

Key words: Mandya- protest –  against- actor- Darshan