ಮಂಡ್ಯದಲ್ಲಿ ಇಂದು ಬೃಹತ್ ಶೋಭಾಯಾತ್ರೆ: ಕೇಸರಿ ಬಾವುಟ, ಬಂಟಿಂಗ್ಸ್ ತೆರವು

ಮಂಡ್ಯ,ಏಪ್ರಿಲ್,2,2026 (www.justkannada.in): ಇಂದು ಮಂಡ್ಯ ನಗರದಲ್ಲಿ  ವಿಶ್ವವಿಂದೂ ಪರಿಷತ್ ವತಿಯಿಂದ ಬೃಹತ್ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಈ ನಡುವೆ ಅನುಮತಿ ಪಡೆಯದೇ ಹಾಕಲಾಗಿದ್ದ ಕೇಸರಿ ಬಾವುಟ, ಬಂಟಿಂಗ್ಸ್ ಗಳನ್ನ ನಗರಸಭೆ ಅಧಿಕಾರಿಗಳು ತೆರವುಗೊಳಿಸಿದ್ದಾರೆ.

ಮಂಡ್ಯದಲ್ಲಿ ಇಂದು ಸಂಜೆ ಬೃಹತ್ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ. ಆದರೆ ಅನುಮತಿ ಪಡೆಯದ ಹಿನ್ನೆಲೆಯಲ್ಲಿ ನಗರಸಭೆ ಅಧಿಕಾರಿಗಳು ಕೇಸರಿ ಬಾವುಟ, ಬಂಟಿಂಗ್ಸ್ ಗಳನ್ನು ತೆರವು ಮಾಡಿದ್ದಾರೆ.

ನಗರಸಭೆ ಅಧಿಕಾರಿಗಳ ಈ ಕ್ರಮಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತರು ಬೇಸರ ವ್ಯಕ್ತಪಡಿಸಿದ್ದು, ರಾಜ್ಯ ಬಿಜೆಪಿ ಕೂಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಮತ್ತೊಂದೆಡೆ ಮಂಡ್ಯ ನಗರದಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

Key words: Mandya, today, shobhayatra, Saffron flags, buntings, removed