Wednesday, October 7, 2026

BDA Apartments

immense respect BDA JK_Adv BDA Adv
Home Front Page ಮಾಜಿ ಸಿಎಂ ಎಸ್.ಎಂ.ಕೃಷ್ಣರನ್ನು ಭೇಟಿ ಮಾಡಿದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು.

ಮಾಜಿ ಸಿಎಂ ಎಸ್.ಎಂ.ಕೃಷ್ಣರನ್ನು ಭೇಟಿ ಮಾಡಿದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು.

ಬೆಂಗಳೂರು, ಏ. 02, 2024 :  ( www.justkannada.in news )  ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಮುತ್ಸದ್ದಿ ಎಸ್.ಎಂ.ಕೃಷ್ಣ ಅವರನ್ನು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಭೇಟಿ. ಸದಾಶಿವ ನಗರದ ಎಸ್.ಎಂ.ಕೃಷ್ಣ ಅವರ ನಿವಾಸದಲ್ಲಿ ಭೇಟಿ ಮಾಡಿದರು.

ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ, ಶಾಸಕ ಗಣಿಗ ರವಿ, ದಿನೇಶ್ ಗೂಳಿಗೌಡ, ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ಹೊನ್ನಲಗೆರೆ ರಾಮಕೃಷ್ಣ, ಮಾಜಿ ವಿಧಾನಪರಿಷತ್ ಸದಸ್ಯ ಮರಿತಿಬ್ಬೇಗೌಡ, ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಚಿದಂಬರಂ ಜತೆಗಿದ್ದರು.

ಎಸ್.ಎಂ.ಕೃಷ್ಣ ಅವರಿಗೆ ಹೂಮಾಲೆ ಹಾಕಿ, ಶಾಲು ಹೊದಿಸಿ ಸನ್ಮಾನಿಸಿದರು. ಉಭಯ ಕುಶಲೋಪರಿ ವಿಚಾರಿಸಿದ ನಾಯಕರು ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಿದರು.

key words : mandya, Star chandru, congress, meets, s.m.krishna