ಒಂದು ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು.

ಮಂಡ್ಯ,ಡಿಸೆಂಬರ್,23,2023(www.justkannada.in): 1 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಪುರಸಭೆಯ ಇಬ್ಬರು ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ.

ಶ್ರೀರಂಗಪಟ್ಟಣ ಪುರಸಭೆಯ ಮುಖ್ಯಾಧಿಕಾರಿ ರಾಣಿ ಹಾಗೂ ಕಂದಾಯ ಅಧಿಕಾರಿ ಗಿರೀಶ್ ಲೋಕಾಯುಕ್ತ ಬಲೆಗೆ ಬಿದ್ದವರು. ಪೌತಿ ಖಾತೆ ಮಾಡಿಕೊಡಲು ಅಧಿಕಾರಿಗಳಿಬ್ಬರೂ ಮಂಡ್ಯ ಮೂಲದ ಪ್ರಶಾಂತ್ ಎಂಬುವವರ ಬಳಿ 2 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಕಚೇರಿಯಲ್ಲಿ ಮುಂಗಡವಾಗಿ 1 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಡಿವೈಎಸ್ ಪಿ ಸುನೀಲ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ.

Key words: mandya-Two officers –accepting –bribe- Lokayukta- trap