ಮಂಗಳೂರು ಗೋಲಿಬಾರ್ ಗೆ ಕೇರಳಾದಲ್ಲಿ ಖಂಡನೆ: ಸಿಎಂ ಬಿಎಸ್ ಯಡಿಯೂರಪ್ಪ ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ…

ಕಣ್ಣೂರು, ಡಿ,24,2019(www.justkannada.in):  ಕೇರಳ ಪ್ರವಾಸದಲ್ಲಿರುವ ಕರ್ನಾಟಕ ಸಿಎಂ ಬಿಎಸ್ ಯಡಿಯೂರಪ್ಪಗೆ ಪ್ರತಿಭಟನೆ ಬಿಸಿ ತಟ್ಟಿದೆ. ಹೌದು, ಮಂಗಳೂರಿನಲ್ಲಿ ಪ್ರತಿಭಟನೆ ವೇಳೆ ಪೊಲೀಸರು ನಡೆಸಿದ ಫೈರಿಂಗ್ ಅನ್ನ ಖಂಡಿಸಿ ಕೇರಳಾದಲ್ಲಿ ಪ್ರತಿಭಟನೆ ನಡೆದಿದೆ.

ಮಂಗಳೂರು ಹಿಂಸಾಚಾರ ಪ್ರಕರಣ ಖಂಡಿಸಿ ಕಣ್ಣೂರಿನಲ್ಲಿ ಡಿವೈಎಫ್ ಐ ಕಾರ್ಯಕರ್ತರು  ಸಿಎಂ ಯಡಿಯೂರಪ್ಪ ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಸಿಎಎ ಪ್ರತಿಭಟನಾಕಾರರ ಮೇಲೆ ಮಂಗಳೂರಿನಲ್ಲಿ ಗೋಲಿಬಾರ್ ಆದ ಘಟನೆಗೆ ಖಂಡಿಸಿ ಪ್ರತಿಭಟನಾಕಾರರು ಯಡಿಯೂರಪ್ಪ ಕಾರಿಗೆ ಮುತ್ತಿಗೆ  ಹಾಕಿ ಆಕ್ರೋಶ ಹೊರಹಾಕಿದ್ದಾರೆ.

ಕಣ್ಣೂರಿನ ಸಮೀಪದ ತಳಿಪರಂಬ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಯಡಿಯೂರಪ್ಪ ತೆರಳಿದ್ದರು. ಅಲ್ಲಿ ವಿಶೇಷ ಪೂಜೆ ಮುಗಿಸಿ ವಾಪಸ್ಸಾಗುವ ವೇಳೆ ಅವರ ಕಾರನ್ನು ಅಡ್ಡಗಟ್ಟಿ ಮುತ್ತಿಗೆ ಹಾಕಿದ್ದಾರೆ.  ಇನ್ನು ಪ್ರತಿಭಟನಾಕಾರರು ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದ್ದು ಪ್ರತಿಭಟನಾಕಾರರನ್ನ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. ಬಳಿಕ ಧರಣಿನಿರತರನ್ನ ವಶಕ್ಕೆ ಪಡೆದರು. ಪ್ರತಿಭಟನೆಗಳು ಹೆಚ್ಚಾದ ಕಾರಣ ಯಡಿಯೂರಪ್ಪ ಅವರು ಇಂದೇ ರಾಜ್ಯಕ್ಕೆ ವಾಪಸ್ಸಾಗಲಿದ್ದಾರೆ.

Key words: Mangalore -Golibar -condemned – Kerala-protest-against-CM BS Yeddyurappa