Monday, September 21, 2026

BDA Apartments

Home Front Page ಮಂಗಳೂರು ಹಿಂಸಾಚಾರ ಕುರಿತು ಹೆಚ್.ಡಿಕೆ ವಿಡಿಯೋ ಬಿಡುಗಡೆ ವಿಚಾರ; ಮಾಜಿ ಸಿಎಂ ಸಿದ್ಧರಾಮಯ್ಯ ಪ್ರತಿಕ್ರಿಯಿಸಿದ್ದು ಹೀಗೆ…

ಮಂಗಳೂರು ಹಿಂಸಾಚಾರ ಕುರಿತು ಹೆಚ್.ಡಿಕೆ ವಿಡಿಯೋ ಬಿಡುಗಡೆ ವಿಚಾರ; ಮಾಜಿ ಸಿಎಂ ಸಿದ್ಧರಾಮಯ್ಯ ಪ್ರತಿಕ್ರಿಯಿಸಿದ್ದು ಹೀಗೆ…

ಬಾಗಲಕೋಟೆ,ಜ.10,2020(www.justkannada.in):  ಮಂಗಳೂರು ಗಲಭೆ ಕುರಿತು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿಡಿಯೋ  ಬಿಡುಗಡೆ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸಿದ್ಧರಾಮಯ್ಯ, ಪೊಲೀಸರು ತಪ್ಪು ಮಾಡಿದ್ದಾರೆ ಎಂದು ಮೊದಲೇ ಹೇಳಿದ್ದೆ. ತಮ್ಮ ತಪ್ಪು ಮುಚ್ಚಿ ಹಾಕಲು ಅಮಾಯಕರ ಮೇಲೆ ಕೇಸ್ ಹಾಕಿದ್ದಾರೆ ಎಂದು ಆರೋಪಿಸಿದರು.

ಮಂಗಳೂರು ಹಿಂಸಾಚಾರ  ಬಗ್ಗೆ ಮಾಜಿ ಸಿಎಂ ಎಚ್​ ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿದ ವಿಡಿಯೋ ಕುರಿತು ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ,  ಹಿಂಸಾಚಾರ ಸೃಷ್ಟಿಸಿ ಪೊಲೀಸನವರು ತಪ್ಪು ಮಾಡಿದ್ದಾರೆ. ಅದನ್ನು ಮುಚ್ಚಿಕೊಳ್ಳಲು ಪೊಲೀಸಿನವರೇ ವಿಡಿಯೋ ಮಾಡಿದ್ದಾರೆ. ಘಟನೆಯಲ್ಲಿ ಅಮಾಯಕರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಘಟನೆಯಲ್ಲಿ ಯಾವುದೇ ಅಂಗಡಿ ಮುಂಗಟ್ಟುಗಳಿಗೆ ಹಾನಿಯಾಗಿಲ್ಲ  ಎಂದು ತಿಳಿಸಿದರು.

ಬಿಎಸ್ ಯಡಿಯೂರಪ್ಪ ಎಷ್ಟು ದಿನ ಸಿಎಂ ಆಗಿರುತ್ತಾರೆ ನೋಡೋಣ. ನಾನು ಸಿಎಂ ಆಗಬಾರದು ಅಂತಾ ಜನಾಶೀರ್ವಾದ ಇತ್ತು. ನಂತರ ಒಂದುವರೆ ವರ್ಷದಲ್ಲಿ ಇಬ್ಬರು ಸಿಎಂ ಆದರು. ಹೆಚ್.ಡಿ ಕುಮಾರಸ್ವಾಮಿ, ಬಿಎಸ್ ಯಡಿಯೂರಪ್ಪ ಸಿಎಂ ಆದರು. ಬಿಎಸ್ ವೈ ಎಷ್ಟು ದಿನ ಸಿಎಂ ಆಗಿರುತ್ತಾರೆ ನೋಡೋಣ ಎಂದು ಸಿದ್ದರಾಮಯ್ಯ ತಿಳಿಸಿದರು.

Key words: mangalore-golibar-HD kumaraswamy- video –release-former cm – siddaramaiah