ಕೊಲೆಗಡುಕರಿಗೆ ಪರಿಹಾರ ಕೊಡಲು ಸಾಧ್ಯವೇ…? ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ ಕೆ ಎಸ್ ಈಶ್ವರಪ್ಪ …

ದಾವಣಗೆರೆ,ಡಿ,25,2019(www.justkannada.in): ಮಂಗಳೂರು ಗಲಭೆಯಲ್ಲಿ ಮೃತ ಪಟ್ಟವರ ಬಗ್ಗೆ  ಗ್ರಾಮೀಣಾಭಿವೃದ್ದಿ ಸಚಿವ ಕೆ ಎಸ್ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮಂಗಳೂರು ಗೋಲಿಬಾರ್ ನಲ್ಲಿ ಮೃತ ಪಟ್ಟವರಿಗೆ ಸರ್ಕಾರ ಘೋಷಣೆ ಮಾಡಿದ್ದ ಪರಿಹಾರ ಹಿಂಪಡೆದ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಕೆ.ಎಸ್ ಈಶ್ವರಪ್ಪ, ಮುಸುಕು ಧರಿಸಿ ಗುಂಡಾಗಿರಿ ಮಾಡಿದವರೇ ಸತ್ತಿದ್ದಾರೆ. ಕೊಲೆಗಡುಕರಿಗೆ ಪರಿಹಾರ ಕೊಡಲು ಸಾಧ್ಯವೇ..? ಎಂದು ಹೇಳಿಕೆ ನೀಡಿದ್ದಾರೆ.

ದಾವಣಗೆರೆ ಜಿಲ್ಲೆ ಹರಪ್ಪನಹಳ್ಳಿಯಲ್ಲಿ ಮಾತನಾಡಿದ ಸಚಿವ ಕೆ ಎಸ್ ಈಶ್ವರಪ್ಪ, ಮಂಗಳೂರಿನ ಗಲಾಟೆ ಪೂರ್ವ ನಿರ್ಧಾರಿತ ಕುತಂತ್ರವಾಗಿದೆ. ಇದರ ಬಗ್ಗೆ ಸಿಸಿ ಕ್ಯಾಮರಾದಲ್ಲಿ ಪುರಾವೆ ದೊರೆತಿದೆ. ಪೊಲೀಸ್ ಇಲಾಖೆ ಹಾಗೂ ಸರ್ಕಾರದ ಯಾವುದೇ ಪಾತ್ರವಿಲ್ಲ ಎನ್ನುವುದು ಸ್ಪಷ್ಟವಾಗಿದೆ. ವಿರೋಧ ಪಕ್ಷ ಸರ್ಕಾರ ಹಾಗೂ ಪೊಲೀಸ್ ವಿರುದ್ಧ ನೀಡಿದ ಹೇಳಿಕೆಯನ್ನು ಹಿಂಪಡೆಯಬೇಕು. ಹಾಗೇಯೇ ರಾಜ್ಯದ ಜನತೆಯ ಮುಂದೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

Key words: mangalore-roit-two-death-Minister- KS Eshwarappa – controversial- statement.