“ಮಂಗಳೂರಿನಲ್ಲಿ ಅಲ್ಪಸಂಖ್ಯಾತರು ಆತಂಕದಲ್ಲಿದ್ದಾಗ ಕಾಂಗ್ರೆಸ್‌ ನಾಯಕರು ಬಿಲ ಸೇರಿದ್ದರು” : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು,ಮಾರ್ಚ್,27,2021 (www.justkannada.in):  ಮಂಗಳೂರಿನಲ್ಲಿ ಸಿಎಎ ಪ್ರತಿಭಟನೆ ವೇಳೆ ಹೆಣಗಳು ಬಿದ್ದು, ಅಲ್ಪಸಂಖ್ಯಾತರು ಆತಂಕದಲ್ಲಿದ್ದಾಗ ಕಾಂಗ್ರೆಸ್‌ ನಾಯಕರು ಬಿಲ ಸೇರಿದ್ದರು. ಅಂದು ಮುಸ್ಲಿಮರ ಬೆಂಬಲಕ್ಕೆ ನಿಂತಿದ್ದು ಜೆಡಿಎಸ್‌. ಇಂದು ಬಸವಕಲ್ಯಾಣದಲ್ಲಿ ನಾವು ಮುಸ್ಲಿಂ ಅಭ್ಯರ್ಥಿಯನ್ನು ಹಾಕುತ್ತಲೇ ಕಾಂಗ್ರೆಸ್‌ ತಾನು ಮುಸ್ಲಿಮರ ರಕ್ಷಕ ಎಂದು ಎದೆತಟ್ಟಿಕೊಂಡು ಮುಂದೆ ಬಂದಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.Mangalore,Minorities,While,anxiety,Congress,leaders,Burrow,included,Former CM,H.D.Kumaraswamy ಮೈತ್ರಿ ಸರ್ಕಾರ ಉರುಳಿದ್ದರಲ್ಲಿ ಅಂಥ ಒಳಒಪ್ಪಂದಗಳು ಈಗಾಗಲೇ ಬಯಲಾಗಿವೆ

ಬಸವಕಲ್ಯಾಣದಲ್ಲಿ ಜೆಡಿಎಸ್‌ ಬಿಜೆಪಿಯೊಂದಿಗೆ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ‘ಮಹಾನ್‌ನಾಯಕ’ರು ಹೇಳಿದ್ದಾರೆ. ಪ್ರತಿಯೊಂದಕ್ಕೂ ಒಳ ಒಪ್ಪಂದ, ಒಳಸಂಚು ಮಾಡಿದವರಿಗಷ್ಟೇ ಒಳ ಒಪ್ಪಂದದ ಕನವರಿಕೆ. ಆಪರೇಷನ್‌ ಕಮಲದಲ್ಲಿ, ಮೈತ್ರಿ ಸರ್ಕಾರ ಉರುಳಿದ್ದರಲ್ಲಿ ಅಂಥ ಒಳಒಪ್ಪಂದಗಳು ಈಗಾಗಲೇ ಬಯಲಾಗಿವೆ. ಜೆಡಿಎಸ್‌ಗೆ ಇಂಥ ದುರ್ಬುದ್ಧಿ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶವ್ಯಕ್ತಪಡಿಸಿದ್ದಾರೆ.

ಟಿಪ್ಪು ಸುಲ್ತಾನನ್ನು ದೇಶದ್ರೋಹಿಯನ್ನಾಗಿ ಮಾಡಿದ ಮಹಾನ್‌ ನಾಯಕರು ತೆಪ್ಪಗಿದ್ದರೆ ಸರಿ ramesh jarkiholi-CD-case- Former CM –H.D kumaraswamy-  criticism.

ನಮ್ಮ ಆಯ್ಕೆ, ನಿರ್ಧಾರಗಳ ಬಗ್ಗೆ ಮಾತನಾಡುವುದನ್ನು ಕಾಂಗ್ರೆಸ್‌ನ ಮಹಾನ್‌ ನಾಯಕರು ನಿಲ್ಲಿಸಿದರೆ ಉತ್ತಮ. ಇಲ್ಲವಾದಲ್ಲಿ ಜಾತ್ಯತೀತವಾದಿ ಮುಖವಾಡ ಧರಿಸಿರುವ ಅವರ ಕೋಮುವಾದಿ ಮುಖವನ್ನು ಬಯಲು ಮಾಡಬೇಕಾಗುತ್ತದೆ. ಶತಮಾನಗಳಿಂದ ವೀರನಾಗಿ ಮಲಗಿದ್ದ ಟಿಪ್ಪು ಸುಲ್ತಾನನ್ನು ದೇಶದ್ರೋಹಿಯನ್ನಾಗಿ ಮಾಡಿದ ಮಹಾನ್‌ ನಾಯಕರು ತೆಪ್ಪಗಿದ್ದರೆ ಸರಿ ಎಂದು ಟ್ವೀಟ್ ಮೂಲಕ ಎಚ್ಚರಿಕೆ ನೀಡಿದ್ದಾರೆ.

ENGLISH SUMMARY…

“When the minorities were in panic in Mangalore, Cong. leaders didn’t show off”: Former CM HDK
Bengaluru, Mar. 27, 2021 (www.justkannada.in): “Where were the Congress people when many minorities lost their lives during the CAA protest in Mangalore?. It was JDS that supported them. But today when we have fielded a minority candidate at Basavakalyana, Congress people are claiming that they are protecting the minorities,” said former Chief Minister H. D. Kumaraswamy.
Fuming against former CM Siddaramaiah he said, “A few great leaders are claiming that the JDS has made a secret deal with BJP at Basavakalyana. Only those who always keep thinking about secret agreements can say that. Everyone knows what type of secret deals had taken place during ‘Operation Lotus,’, and pulling down of the coalition government. JDS doesn’t have such a mindset.”
“It will be better if the great leaders of the Congress party stop speaking about our selection and decisions. Otherwise, we will have to expose their communal face concealed under the secular masks. It will be better if the great leaders who projected the great ruler Tipu Sultan as a traitor,” his tweet read.
Keywords: Former CM H.D. Kumaraswamy/ JDS/ Congress/ Former CM Siddaramaiah/ minorities

key words : Mangalore-Minorities-While-anxiety-Congress-leaders-Burrow-included-Former CM-H.D.Kumaraswamy