Sunday, September 20, 2026

BDA Apartments

ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಪ್ರಕರಣ: ಮತ್ತೊಬ್ಬ...
Home Crime ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಪ್ರಕರಣ: ಮತ್ತೊಬ್ಬ ಪ್ರಮುಖ ಆರೋಪಿ ಅರೆಸ್ಟ್

ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಪ್ರಕರಣ: ಮತ್ತೊಬ್ಬ ಪ್ರಮುಖ ಆರೋಪಿ ಅರೆಸ್ಟ್

ಬೆಂಗಳೂರು, ಜುಲೈ 22, 2023 (www.justkannada.in): ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ಪ್ರಕರಣ ಸಂಬಂಧ ಪೊಲೀಸರು ಮತ್ತೊಬ್ಬನನ್ನು ಬಂಧಿಸಿದ್ದಾರೆ.

ಪ್ರಕರಣದಲ್ಲಿ 8 ಪ್ರಮುಖ ಆರೋಪಿಗಳನ್ನು ಪೊಲೀಸರು ಗುರುತಿಸಿದ್ದು, ಈ ಪೈಕಿ ಈಗಾಗಲೇ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

ಮತ್ತೊಬ್ಬ ಪ್ರಮುಖ ಆರೋಪಿಯ ಬಂಧನದ ಬಳಿಕ ಶುಕ್ರವಾರ ಆರೋಪಿಗಳನ್ನು 11 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಭಯಾನಕ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಪೊಲೀಸರು ಗುರುವಾರ ಆರೋಪಿಗಳನ್ನು ಬಂಧಿಸಿದ್ದರು.

ಘಟನೆಯಲ್ಲಿ ಭಾಗಿಯಾಗಿರುವ ಕನಿಷ್ಠ ಎಂಟು ಜನರನ್ನು ತನಿಖಾ ತಂಡ ಗುರುತಿಸಿರುವುದರಿಂದ ಹೆಚ್ಚಿನ ಬಂಧನಗಳು ನಡೆಯಬೇಕಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.