ಪೊಲೀಸ್ ಇಲಾಖೆಗೆ ಸಿಎಂ ಸಿದ್ದರಾಮಯ್ಯರಿಂದ ಹಲವು ಮಹತ್ವದ ಘೋಷಣೆ…

ಬೆಂಗಳೂರು,ಜನವರಿ,16,2024(www.justkannada.in): ಕರ್ನಾಟಕ ಏಕೀಕರಣದ ಸುವರ್ಣ ಮಹೋತ್ಸವದ ಅಂಗವಾಗಿ ಪೊಲೀಸ್ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಹಲವು ಮಹತ್ವದ  ಘೋಷಣೆಗಳನ್ನ ಮಾಡಿದ್ದಾರೆ.

ರಾಜ್ಯದಲ್ಲಿ ಭವ್ಯವಾದ ಸುಸಜ್ಜಿತ ಸುವರ್ಣ ಪೊಲೀಸ್ ಭವನ ನಿರ್ಮಾಣ. ಇದಕ್ಕಾಗಿ ಬಜೆಟ್ ನಲ್ಲಿ ಹಣ ನಿಗದಿ ಮಾಡುವುದು, ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಬೆಳ್ಳಿ ಪದಕ, ರಾಜ್ಯದ ಎಲ್ಲಾ ಪೊಲೀಸರ ವೈದ್ಯಕೀಯ ವೆಚ್ಚ 1000 ದಿಂದ 1500 ಕ್ಕೆ ಹೆಚ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹಾಗೆಯೇ CEN ಠಾಣಾಧಿಕಾರಿಗಳ ಹುದ್ದೆಯನ್ನು ACP ಮತ್ತು DCP ಮಟ್ಟಕ್ಕೆ ಉನ್ನತೀಕರಣ, ಬೆಂಗಳೂರು ನಗರದಲ್ಲಿ 8 ಅಡಿಷನಲ್ DCP ಹುದ್ದೆಗಳನ್ನು ಹೆಚ್ಚುವರಿಯಾಗಿ ಸೃಜಿಸಲಾಗುವುದು  ರಾಜ್ಯವನ್ನು ಡ್ರಗ್ ಮುಕ್ತ ಗೊಳಿಸುವ ದಿಕ್ಕಿನಲ್ಲಿ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ENGLISH SUMMARY…

CM Siddaramaiah made important announcements for the police department in Karnataka.

  • Announcements include construction of a grand police house, increase in medical expenses for policemen, and upgrading of CEN Station Officers to ACP and DCP level.
  • 8 additional DCP posts will be created in Bengaluru city and steps will be taken to make the state drug free.

Key words: Many important -announcements – CM Siddaramaiah – police department.