ಮೈತ್ರಿ ಬಗ್ಗೆ ಬಹಳಷ್ಟು ಮುಖಂಡರಿಗೆ ವಿರೋಧ: ಹಲವು ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ- ಡಿಸಿಎಂ ಡಿ.ಕೆ ಶಿವಕುಮಾರ್.

ಬೆಂಗಳೂರು,ಸೆಪ್ಟಂಬರ್,28,2023(www.justkannada.in): ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಬಹಳಷ್ಟು ಮುಖಂಡರು ವಿರೋಧ ವ್ಯಕ್ತಪಡಿಸಿದ್ದಾರೆ.  ಹಲವು ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ ಶಿವಕುಮಾರ್,  ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಎರಡೂ ಪಕ್ಷಗಳ ನಾಯಕರು ಅಸಮಾಧಾನಗೊಂಡಿದ್ದಾರೆ. ಕಾಂಗ್ರೆಸ್ ಸೇರುವ ಮನಸ್ಸು ಮಾಡುತ್ತಿದ್ದಾರೆ. ಈ ವಿಷಯ ಮತ್ತು ಮುಂಬರುವ ಪರಿಷತ್ ಚುನಾವಣೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಹಿರಿಯ ನಾಯಕರೊಂದಿಗೆ ಚರ್ಚಿಸಬೇಕಿದೆ  ಎಂದರು.

ಮೈತ್ರಿಗೆ ಬಗ್ಗೆ ಬಹಳಷ್ಟು ಜನಕ್ಕೆ ವಿರೋಧ ಇದೆ. ಕಾಂಗ್ರೆಸ್ ಪಕ್ಷಕ್ಕೆ ಸೇರವವರು ಯಾವುದೇ ಷರತ್ತು ವಿಧಿಸಿಲ್ಲ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.

Key words: Many leaders – against – BJP-JDS-alliance- DCM -DK Shivakumar.