Saturday, August 15, 2026

BDA Apartments

Home Front Page ನ.15 ರಂದು ಜೆಡಿಎಸ್ ಬಿಜೆಪಿ ಹಲವು ನಾಯಕರು ಕಾಂಗ್ರೆಸ್ ಸೇರಲಿದ್ದಾರೆ- ಡಿಸಿಎಂ ಡಿ.ಕೆ ಶಿವಕುಮಾರ್.

ನ.15 ರಂದು ಜೆಡಿಎಸ್ ಬಿಜೆಪಿ ಹಲವು ನಾಯಕರು ಕಾಂಗ್ರೆಸ್ ಸೇರಲಿದ್ದಾರೆ- ಡಿಸಿಎಂ ಡಿ.ಕೆ ಶಿವಕುಮಾರ್.

ನವದೆಹಲಿ,ನವೆಂಬರ್,8,2023(www.justkannada.in): ಬಿಜೆಪಿ ಹಾಗೂ ಜೆಡಿಎಸ್ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ. ನವೆಂಬರ್ 15 ರಂದು ಜೆಡಿಎಸ್ ಬಿಜೆಪಿಯ ಹಲವು ನಾಯಕರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಮಾರ್ಕೆಟ್​ನಲ್ಲಿ ಇರುವುದಕ್ಕೆ ಇಂತಹ ಪ್ರಯತ್ನ ಮಾಡುತ್ತಿದ್ದಾರೆ. ಬಿಜೆಪಿಯವರು ನಮ್ಮ ಶಾಸಕರನ್ನೂ ಕರೆದುಕೊಳ್ಳಲು ಆಗಲ್ಲ. ಬಿಜೆಪಿಯಲ್ಲಿ ನಾಯಕತ್ವದ ಬಗ್ಗೆಯೇ ತೀರ್ಮಾನ‌ ಮಾಡಲು ಆಗಿಲ್ಲ. ಬಿಜೆಪಿಯವರು ಗೊಂದಲ ಸೃಷ್ಟಿಸಲು ಪ್ರಯತ್ನ ಮಾಡುತ್ತಿದ್ದಾರೆ. ಬಿಜೆಪಿಯಲ್ಲೇ ಸಾಕಷ್ಟು ಸಮಸ್ಯೆ ಇದೆ ಎಂದರು.

ಮೇಕೆದಾಟು ವಿಚಾರವನ್ನು CWMA ಸಭೆಯಲ್ಲಿ ಪ್ರಸ್ತಾಪಿಸಲಾಗಿದ್ದು. ‘ಸುಪ್ರೀಂ’ ಆದೇಶದಂತೆ ಬೆಂಗಳೂರಿಗೆ 24 ಟಿಎಂಸಿ ನೀರು ಮೀಸಲು ಇಡಲಾಗುತ್ತದೆ. ನೀರು ಮೀಸಲಿಡುವ ಬಗ್ಗೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ‘ಸುಪ್ರೀಂ’ ಅನುಮತಿ ಪಡೆದು ಪ್ರತಿವರ್ಷ 24 ಟಿಎಂಸಿ ನೀರು ಮೀಸಲಿಟ್ಟು ಆದೇಶ ಹೊರಡಿಸಿದ್ದೇವೆ. ಮುಂದಿನ ವಾರ ಮೇಕೆದಾಟು ಯೋಜನೆ ವಿಚಾರ ಚರ್ಚೆಗೆ ಬರಲಿದೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.

Key words: Many leaders – JDS –BJP- will join-Congress – DCM -DK Shivakumar