ಅಕ್ರಮ ಗಾಂಜಾ ಮಾರಾಟ:  ಇಬ್ಬರು ಅಂದರ್

ಚಾಮರಾಜನಗರ,ಜುಲೈ,31,2025 (www.justkannada.in): ಅಕ್ರಮ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರನ್ನ ಗುಂಡ್ಲುಪೇಟೆ  ಠಾಣಾ ಪೊಲೀಸರು ಬಂಧಿಸಿದ್ದಾರೆ.

ಜಾಕೀರ್‌ ಹುಸೇನ್ ನಗರದ ಸಲ್ಮಾನ್ ಹಾಗೂ ಇಮ್ರಾನ್ ಬಂಧಿತ ಆರೋಪಿಗಳು. ಬಂಧಿತರಿಂದ 1 ಕೆ.ಜಿ 60 ಗ್ರಾಂ ಒಣ ಗಾಂಜಾ ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿ ಮೇರೆಗೆ ಇನ್ಸ್‌ಪೆಕ್ಟ‌ರ್ ಜಯಕುಮಾ‌ರ್ ನೇತೃತ್ವದ ತಂಡ ದಾಳಿ ನಡೆಸಿ  ಇಬ್ಬರನ್ನು ಬಂಧಿಸಿದ್ದಾರೆ.

ಬಜಾಜ್ ಬಾಕ್ಸರ್ TN 37, Y 6026 ದ್ವಿ ಚಕ್ರ ವಾಹನದಲ್ಲಿ ಮಾರಾಟ ಮಾಡಲು ತಂದಿದ್ದ 1 ಕೆಜಿ 60 ಗ್ರಾಂ. ಒಣ ಗಾಂಜಾ ವಶಕ್ಕೆ ಪಡೆದಿದ್ದು ಗುಂಡ್ಲುಪೇಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಬಂಧಿತ ಆರೋಪಿಗಳು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.vtu

Key words: Illegal sale , marijuana, Two, arrested