ವಿವಾಹಿತ ಮಹಿಳೆ ನೇಣು ಬಿಗುದು ಆತ್ಮಹತ್ಯೆಗೆ ಶರಣು.

ಬೆಂಗಳೂರು,22,2021(www.justkannada.in):  ಕೌಟುಂಬಿಕ ಕಲಹ ಹಿನ್ನೆಲೆ ನೇಣು ಬಿಗಿದುಕೊಂಡು  ವಿವಾಹಿತ ಮಹಿಳೆ ಆತ್ಮಹತ್ಯೆಗೆ ಘಟನೆ ರಾಜ್ಯ ರಾಜಧಾನಿ ಬೆಂಗಳೂರಲ್ಲಿ ನಡೆದಿದೆ.

ಬೆಂಗಳೂರಿನ ದ್ವಾರಕಾನಗರದಲ್ಲಿ ಈ ಘಟನೆ ನಡೆದಿದೆ.  ರಾಜೇಶ್  ಎಂಬುವವರ ಪತ್ನಿ ನಿತ್ಯಶ್ರೀ (25)  ನೇಣಿಗೆ ಶರಣಾದವರು. ಮಂಡ್ಯ ಜಿಲ್ಲೆ ಪಾಂಡವಪುರ ಮೂಲದ ನಿತ್ಯಶ್ರೀ ಜತೆ 2019ರಲ್ಲಿ ರಾಜೇಶ್​ ಮದುವೆ ಆಗಿದ್ದರು. ದಂಪತಿಗೆ ಒಂದು ವರ್ಷದ ಹೆಣ್ಣು ಮಗು ಇದೆ. ಮಗು ಜತೆ ದಂಪತಿ ಬೆಂಗಳೂರಿನ ದ್ವಾರಕಾನಗರದ ಕೃಷ್ಣ ಟೆಂಪಲ್ ಬಳಿ ಮನೆಯೊಂದರಲ್ಲಿ ವಾಸವಿದ್ದರು ಎನ್ನಲಾಗಿದೆ.

ಇಂದು ಮಧ್ಯಾಹ್ನ ನಿತ್ಯಶ್ರೀ ಮನೆಯಲ್ಲಿ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೌಟುಂಬಿಕ ಕಲಹದಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳಲಾಗಿದೆ ಎನ್ನಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಗಿರಿನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Key words: married- woman -commits -suicide – hanging- herself-bangalore