ಇದೇ ಗುರುವಾರ ಮಾಸ್ಕ್ ಡೇ ಆಚರಣೆಗೆ ನಿರ್ಧಾರ: ಮತ್ತೆ ಲಾಕ್ ಡೌನ್ ಜಾರಿ ವದಂತಿ ಕುರಿತು ಸ್ಪಷ್ಟನೆ ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ…

ಬೆಂಗಳೂರು,ಜೂ,15,2020(www.justkannada.in):  ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿಗೊಳಿಸಿವು ಯೋಚನೆ ಇಲ್ಲ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಜಾರಿಗೊಳಿಸುವ ಯೋಚನೆಯಿಲ್ಲ. ವಾರಾಂತ್ಯದ ಕರ್ಪ್ಯೂ ಜಾರಿಯೂ ಮಾಡುವುದಿಲ್ಲ. ಪ್ರಧಾನಿ ಜತೆ ಸಂವಾದದ ವೇಳೆ ಮತ್ತುಷ್ಟು ವಿನಾಯಿತಿ ಕೋರಲಾಗುವುದು ಎಂದು ತಿಳಿಸಿದರು.mask-day-thursday-cm-bs-yeddyurappa-lockdown

ಹಾಗೆಯೇ ಇದೇ ಗುರುವಾರ ಮಾಸ್ಕ್ ಡೇ ಆಚರಣೆಗೆ ನಿರ್ಧಾರ ಮಾಡಲಾಗಿದೆ. ಮಾಸ್ಕ್ ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ‌ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಚಿತ್ರನಟರು, ಗಣ್ಯರು ಭಾಗವಹಿಸಿ ಜನರಲ್ಲಿ ಸಾಮಾಜಿಕ ಅಂತರ,‌ ಮಾಸ್ಕ್ ಧರಿಸುವ ಬಗ್ಗೆ ಅರಿವು ಮೂಡಿಸಲಿದ್ದಾರೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

Key words: Mask Day – Thursday-CM BS Yeddyurappa – lockdown