Friday, September 11, 2026

BDA Apartments

ಬಿಎಂಟಿಸಿ ಬಸ್ ಗಳಲ್ಲಿ ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯ BDA JK_Adv BDA Adv
Home Front Page ಬಿಎಂಟಿಸಿ ಬಸ್ ಗಳಲ್ಲಿ ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯ.

ಬಿಎಂಟಿಸಿ ಬಸ್ ಗಳಲ್ಲಿ ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯ.

ಬೆಂಗಳೂರು,ಡಿಸೆಂಬರ್,23,2022(www.justkannada.in):  ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೊರೋನಾ ಉಲ್ಬಣವಾಗುತ್ತಿದ್ದು ದೇಶದಲ್ಲೂ ಕೊವೀಡ್ ಭೀತಿ ಎದುರಾದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ. ಈ ನಡುವೆ  ಬಿಎಂಟಿಸಿ ಬಸ್ ​ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಮಾಸ್ಕ್​  ಕಡ್ಡಾಯ ಮಾಡಲಾಗಿದೆ.

ಆರೋಗ್ಯ ಇಲಾಖೆ ನಿರ್ದೇಶನದಂತೆ ಈ ಕುರಿತು ಬಿಎಂಟಿಸಿ ಸುತ್ತೋಲೆ ಹೊರಡಿಸಿದ್ದು, ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್  ಧರಿಸಬೇಕು. ಬಿಎಂಟಿಸಿ ಬಸ್ ಸಿಬ್ಬಂದಿಗಳಿಗೂ ಮಾಸ್ಕ್  ಕಡ್ಡಾಯ ಬೂಸ್ಟರ್ ಡೋಸ್ ಹಾಕಿಸಿಕೊಳ್ಳುವಂತೆ ಮನವಿ ಮಾಡಿದೆ.ಬಿಎಂಟಿಸಿ ಬಸ್ ಗಳಲ್ಲಿ ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯ bmtc mask

ನಾಳೆಯಿಂದ  ಬಿಎಂಟಿಸಿ ಬಸ್​ಗಳಲ್ಲಿ ಪ್ರಯಾಣಿಸಬೇಕಾದರೆ ಮಾಸ್ಕ್​ ಕಡ್ಡಾಯವಾಗಿ ಧರಸಬೇಕು. ಒಂದು ವೇಳೆ ಮಾಸ್ಕ್​ ಹಾಕಿಲ್ಲ ಅಂದ್ರೆ ಬಸ್​ ಹತ್ತುವಂತಿಲ್ಲ.

Key words: Masks -mandatory -passengers – BMTC- buses.