ನಾಳೆ ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಸರಳ ವಿವಾಹ

ಮೈಸೂರು,ಮೇ.21,2025 (www.justkannada.in): ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ವತಿಯಿಂದ ಮಾಂಗಲ್ಯ ಭಾಗ್ಯ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮವನ್ನು ಮೇ 22 ರಂದು ಮಧ್ಯಾಹ್ನ 12:20 ರಿಂದ 12:50 ರೊಳಗೆ ಸಲ್ಲುವ ಅಭಿಜಿನ್ ಲಗ್ನದಲ್ಲಿ, ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಆಯೋಜಿಸಲಾಗಿದೆ.

ಮುಖ್ಯ ಮಂತ್ರಿ  ಸಿದ್ದರಾಮಯ್ಯ ಹಾಗೂ ಉಕ್ಕು ಮತ್ತು ಬೃಹತ್ ಕೈಗಾರಿಕಾ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ. ಹೆಚ್.ಸಿ ಮಹದೇವಪ್ಪ ಹಾಗೂ ಪಶು ಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವ ಕೆ. ವೆಂಕಟೇಶ್, ಘನ ಉಪಸ್ಥಿಯಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ವಹಿಸುವರು.

ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ  ರಾಮಲಿಂಗರೆಡ್ಡಿ ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು. ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ನಿಗಮದ ಅಧ್ಯಕ್ಷರು ಹಾಗೂ ಹೆಚ್.ಡಿ ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅನಿಲ್ ಕುಮಾರ್.ಸಿ, ಚಾಮುಂಡೇಶ್ವರಿ ವಿದ್ಯುತ್ ನಿಗಮ ನಿಯಮಿತದ ಅಧ್ಯಕ್ಷ ಎ.ಬಿ ರಮೇಶ್ ಬಂಡಿ ಸಿದ್ದೇಗೌಡ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ. ಪುಷ್ಪ ಅಮರನಾಥ್ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ  ಡಾ. ಮಾನಸ ಅವರು ಗೌರವ ಉಪಸ್ಥಿತರಿರಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ  ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಚಾಮರಾಜನಗರ ಸಂಸದ ಸುನೀಲ್ ಬೋಸ್ ಅವರು ಆಗಮಿಸಲಿದ್ದಾರೆ.

ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಹರೀಶ್ ಗೌಡ, ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕ ತನ್ವೀರ್ ಸೇಠ್, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ, ಕೃಷ್ಣರಾಜನಗರ ವಿಧಾನಸಭಾ ಶಾಸಕ ರವಿಶಂಕರ್ ಡಿ, ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕಟಿ.ಎಸ್.ಶ್ರೀವತ್ಸ, ಹುಣಸೂರು ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಡಿ.ಹರೀಶ್ ಗೌಡ ಹಾಗೂ ವಿಧಾನ ಪರಿಷತ್ ಸದಸ್ಯರುಗಳಾದ ಹೆಚ್. ವಿಶ್ವನಾಥ್, ಡಾ. ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಮಧು ಜಿ. ಮಾದೇಗೌಡ,ಡಾ. ಯತಿಂದ್ರ ಎಸ್. ಮತ್ತು ವಿವೇಕಾನಂದ ಎಸ್. ಅವರು ಸಮಾರಂಭದ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್ ಹಾಗೂ ಕಾವೇರಿ ಜಲಾನಯನ ಯೋಜನೆಯ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷ ಮರಿಸ್ವಾಮಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಆಗಮಿಕರಾದ ವೇ.ಬ್ರ.ಶ್ರೀ ಜೆ. ನಾಗಚಂದ್ರ ದೀಕ್ಷಿತ್ ಕಾರ್ಯಕ್ರಮದ ಪೌರೋಹಿತ್ಯವನ್ನು ವಹಿಸುವರು.

Key words: Mass simple wedding, Nanjanagudu. Srikantheshwara Swamy Temple