Sunday, September 13, 2026

BDA Apartments

ಮಾಜಿ ಸಚಿವ ಡಿಕೆ ಶಿವಕುಮಾರ್ ಬಂಧನ ಖಂಡಿಸಿ ಮೈಸೂರಿನಲ್ಲಿ ಬೃಹತ್ ಪ್ರತಿಭಟನಾ ...
Home Front Page ಮಾಜಿ ಸಚಿವ ಡಿಕೆ ಶಿವಕುಮಾರ್  ಬಂಧನ ಖಂಡಿಸಿ ಮೈಸೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ…

ಮಾಜಿ ಸಚಿವ ಡಿಕೆ ಶಿವಕುಮಾರ್  ಬಂಧನ ಖಂಡಿಸಿ ಮೈಸೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ…

ಮೈಸೂರು,ಸೆ,9,2019(www.justkannada.in):  ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರ ಬಂಧನ ವಿರೋಧಿಸಿ ಮೈಸೂರು ಮತ್ತು ಚಾಮರಾಜನಗರ ಒಕ್ಕಲಿಗ ಸಂಘದ ವತಿಯಿಂದ ಮೈಸೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಯಿತು.

ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಲಾಯಿತು. ಕೋಟೆ ಆಂಜನೇಯ ಸ್ವಾಮಿ ದೇವಾಲಯದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ  ನಡೆಯುತ್ತಿದ್ದು ಕಾಂಗ್ರೆಸ್ ಮುಖಂಡರಾದ  ಸಿ ಎಚ್ ವಿಜಯಶಂಕರ್, ಡಾ, ರವೀಂದ್ರ, ಮೇಯರ್ ಪುಷ್ಪಲತಾ ಜಗನ್ನಾಥ್ ಸೇರಿದಂತೆ ಐನೂರಕ್ಕೂ ಹೆಚ್ಚು ಸಮುದಾಯದ ಮುಖಂಡರು ಭಾಗಿಯಾಗಿದ್ದಾರೆ.

ರ್ಯಾಲಿಯಲ್ಲಿ‌ ಪಕ್ಷಾತೀತಾಗಿ ಒಕ್ಕಲಿಗ ಸಮುದಾಯದ ಮುಖಂಡರು ನಿಂತಿದ್ದು  ಬಿಜೆಪಿ, ಕಾಂಗ್ರೆಸ್, ಹಾಗೂ ಜೆಡಿಎಸ್ ಪಕ್ಷದಿಂದ ಮುಖಂಡರುಗಳು ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ. ಮೈಸೂರು ಚಾಮರಾಜನಗರ ಒಕ್ಕಲಿಗರ ಸಂಘ ಹಾಗೂ ವಿವಿಧ ಪಕ್ಷದ ಮುಖಂಡರು, ಸಂಘ ಸಂಸ್ಥೆಯ ಕಾರ್ಯಕರ್ತರು ಪ್ರತಿಭಟನೆ ಮೆರವಣಿಗೆಯಲ್ಲಿ ಭಾಗಿಯಾಗಿದ್ದರು.

Key words: Massive- protest rally –Mysore- condemns- arrest – former minister -DK Sivakumar