ಬಿಹಾರದಲ್ಲಿ ಸಾಮೂಹಿಕ ಅತ್ಯಾಚಾರ : ಯುವತಿ ಆತ್ಮಹತ್ಯೆಗೆ ಶರಣು 

ಪಾಟ್ನಾ,ಅಕ್ಟೊಂಬರ್,03,2020(www.justkannda.in) : ಉತ್ತರ ಪ್ರದೇಶದ ಹಥ್ರಾಸ್ ನಲ್ಲಿ  ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಮಾಸುವ ಮುನ್ನವೇ ಬಿಹಾರದಲ್ಲಿ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ.jk-logo-justkannada-logo

ಬಿಹಾರದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಆಕೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

Mass-rape-Bihar-Young-woman-commits-suicide
ಯುವತಿ ಮೇಲೆ ಮೂವರು ಅತ್ಯಾಚಾರ ನಡೆಸಿದ್ದಾರೆ ಎಂದು ಯುವತಿ ಪೋಷಕರು ದೂರು ನೀಡಿದ್ದಾರೆ. ರಾಹುಲ್ ಕುಮಾರ್, ಚಿಂಟು ಹಾಗೂ ಚಂದನ್ ಕುಮಾರ್ ಅವರ ಹೆಸರನ್ನು ದೂರಿನಲ್ಲಿ ನೀಡಿದ್ದಾರೆ. ಗಯಾ ಮೆಡಿಕಲ್ ಕಾಲೇಜಿನಲ್ಲಿ ಆಟೊಪ್ಸಿ ನಡೆಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ.ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲಿಯೇ ಅತ್ಯಾಚಾರ ಪ್ರಕರಣಗಳು ಸಂಖ್ಯೆ ಹೆಚ್ಚುತ್ತಿರುವುದು ಆತಂಕಕಾರಿ ವಿಷಯವಾಗಿದೆ.

key words : Mass-rape-Bihar-Young-woman-commits-suicide