ವೆಸ್ಟ್‌ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಕನ್ನಡಿಗ ಮಯಾಂಕ್ ಅಗರ್ವಾಲ್

ಮುಂಬೈ, ಡಿಸೆಂಬರ್ 11, 2019 (www.justkannada.in): ಕನ್ನಡಿಗ ಮಯಾಂಕ್ ಅಗರ್ವಾಲ್ ಗೆ ವೆಸ್ಟ್‌ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಅವಕಾಶ ನೀಡಲಾಗಿದೆ.

ಮೊಣಕಾಲು ಗಾಯದಿಂದ ವಿಶ್ರಾಂತಿ ಪಡೆಯುತ್ತಿದ್ದ ಆರಂಭಿಕ ಆಟಗಾರ ಶಿಖರ್ ಧವನ್ ಗೆ ಇನ್ನಷ್ಟು ವಿಶ್ರಾಂತಿ ಅಗತ್ಯವಿರುವುದರಿಂದ ಅವರ ಬದಲಿಗೆ ಮಯಾಂಕ್ ಗೆ ಟೀಂ ಇಂಡಿಯಾ ಬಾಗಿಲು ತೆರೆದಿದೆ.

ವಿಂಡೀಸ್ ವಿರುದ್ಧ ಭಾರತ ಮೂರು ಏಕದಿನ ಪಂದ್ಯಗಳನ್ನು ಆಡಲಿದೆ. ಮೊದಲನೇ ಪಂದ್ಯ ಡಿಸೆಂಬರ್ 15 ರಂದು ಚೆನ್ನೈ, ಎರಡನೇ ಪಂದ್ಯ ಡಿ.18 ರಂದು ವಿಶಾಖಪಟ್ಟಣಂ ಹಾಗೂ ಕೊನೆಯ ಪಂದ್ಯ ಡಿ.22 ರಂದು ಕಟಕ್‌ನಲ್ಲಿ ಜರುಗಲಿದೆ.