ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿಯಾಗಿ  ಎಂಬಿಬಿಎಸ್ ವಿದ್ಯಾರ್ಥಿ ಸಾವು.

ಮೈಸೂರು,ಜನವರಿ,5,2022(www.justkannada.in): ಭೀಕರ ರಸ್ತೆ ಅಪಘಾತದಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಶಾಂತಲಾ ಸಿಗ್ನಲ್ ಬಳಿ ತಡರಾತ್ರಿ ಈ ಘಟನೆ ನಡೆದಿದೆ. ಬೆಳಗಾವಿಯ ಘಟಪ್ರಭಾದ ಎಲ್.ಎಚ್. ರಾಹುಲ್ ಮೃತಪಟ್ಟ ವಿದ್ಯಾರ್ಥಿ. ಶಾಂತಲಾ ಸಿಗ್ನಲ್ ದಾಟುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿಯಾಗಿ ರಾಹುಲ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.man-death-lack-of-oxygen-private-hospital-mysore

ಬಸ್ ಡಿಕ್ಕಿಯಾದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಕೆ.ಆರ್. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಹುಲ್ ಮೈಸೂರು ಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಯಾಗಿದ್ದನು.

Key words: MBBS-student -dies – KSRTC- bus -collision