ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ: ಕಂಟ್ರೋಲ್ ರೂಂ ತೆರೆಯಲು ಸೂಚನೆ-ಸಿಎಂ ಸಿದ್ದರಾಮಯ್ಯ.

ಬೆಂಗಳೂರು, ಮಾರ್ಚ್,5,2024(www.justkannada.in): ರಾಜ್ಯದಲ್ಲಿ ಬರಗಾಲ ಉಂಟಾಗಿದ್ದು ಈ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ.  ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಕಂಟ್ರೋಲ್ ರೂಂ ತೆರೆಯಲು ಸೂಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಇಂದು ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗೊಳೊಂದಿಗೆ ಬರ ನಿರ್ವಹಣೆ ಪರಿಶೀಲನೆ ಸಭೆ ನಡೆಸಿ ಚರ್ಚೆ ನಡೆಸಿದರು.

ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕುಡಿಯುವ ನೀರಿನ‌ ಸಮಸ್ಯೆ ಆಗದಂತೆ ಸರ್ಕಾರ ಎಲ್ಲಾ ಕ್ರಮ ಕೈಗೊಳ್ಳಲಾಗುತ್ತಿದೆ. ಹಣಕ್ಕೂ ತೊಂದರೆ ಆಗದ ರೀತಿ ನೋಡಿಕೊಳ್ಳುತ್ತೇವೆ. ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಕಂಟ್ರೋಲ್ ರೂಂ, ಸಹಾಯವಾಣಿ ಆರಂಭಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ರಾಜ್ಯದ 194 ತಾಲೂಕುಗಳಲ್ಲಿ ತೀವ್ರ ಬರಗಾಲವಿದೆ. ಬರ ನಿರ್ವಹಣಗೆ ಅಗತ್ಯ ಕ್ರಮ ಕೈಗೊಂಡಿದ್ದೇವೆ ನೀರಿನ ಸಮಸ್ಯೆ ನಿವಾರಣೆ ಮಾಡಲು ಸೂಚಿಸಿದ್ದೇನೆ.  ಎಲ್ಲಾ ಜಿಲ್ಲಾಧಿಕಾರಿಗಿಗೆ ಸೂಚನೆ ನೀಡಿದ್ದೇವೆ. ಕುಡಿಯುವ ನೀರಿಗೆ ಎಷ್ಟು ಹಣ ಬೇಕಾದರೂ ಕೊಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Key words: Measures – prevent -drinking water – becoming – problem-CM Siddaramaiah.