ಶ್ರೀ ಜಯದೇವ ಆಸ್ಪತ್ರೆಯಲ್ಲಿ ಕೆ.ಎಸ್.ಆರ್. ಟಿ.ಸಿ ಸಿಬ್ಬಂದಿಗೆ ವೈದ್ಯಕೀಯ ತಪಾಸಣೆ: ಮಾರ್ಗಸೂಚಿ ಪ್ರಕಟ

ಬೆಂಗಳೂರು, ನವೆಂಬರ್ 07, 2023 (www.justkannada.in): ಕೆಎಸ್‌ಆರ್‌ಟಿಸಿ ಎಲ್ಲಾ ಸಿಬ್ಬಂದಿಗಳಿಗೆ ಹೃದಯ ಸಂಬಂಧಿ ವೈದ್ಯಕೀಯ ತಪಾಸಣೆಗಳನ್ನು ಮಾಡಿಸಲು ಐದು ವರ್ಷಗಳ ಅವಧಿಗೆ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿದೆ.

ಬೆಂಗಳೂರು ಮತ್ತು ಮೈಸೂರಿನಲ್ಲಿರುವ ಜಯದೇವ ಘಟಕದ ಸಹಯೋಗದೊಂದಿಗೆ ಹೃದಯ ಸಂಬಂಧಿ ವೈದ್ಯಕೀಯ ತಪಾಸಣೆಗಳನ್ನು ಮಾಡಲಾಗುತ್ತದೆ.

ನಿಗಮದ ನೌಕರರು ಮತ್ತು ಅಧಿಕಾರಿಗಳನ್ನು ತಪಾಸಣೆಗೆ ನಿಯೋಜಿಸುವ ಸಂಬಂಧ ಸುತ್ತೋಲೆಯಲ್ಲಿ ನಿರ್ದೇಶನಗಳನ್ನು ನೀಡಲಾಗಿದೆ. ಮುಂದಿನ 5 ವರ್ಷಗಳವರೆಗೆ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯೊಂದಿಗೆ ಒಡಂಬಡಿಕೆಯನ್ನು ನವೀಕರಿಸಲಾಗಿದೆ.

ಈ ಹಿಂದಿನ ಪದ್ಧತಿಯಂತೆ 40 ವರ್ಷ ಮತ್ತು ಮೇಲ್ಪಟ್ಟ ಅಧಿಕಾರಿ/ ಸಿಬ್ಬಂದಿಗಳನ್ನು ವಾಹನಗಳ ಕಾರ್ಯಾಚರಣೆಯಲ್ಲಿ ಯಾವುದೇ ವ್ಯತ್ಯಯ ಆಗದಂತೆ ಹೃದಯ ತಪಾಸಣೆಗೆ ನಿಯೋಜಿಸುವ ನಿರ್ದೇಶನ ನೀಡಲಾಗಿದೆ. ಈ ಕುರಿತು ಸುತ್ತೋಲೆಯನ್ನು ಹೊರಡಿಸಲಾಗಿದೆ.