Saturday, October 3, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Front Page ಕನಕಪುರಕ್ಕೆ ಮೆಡಿಕಲ್ ಕಾಲೇಜು ನೀಡುವಂತೆ ಆಗ್ರಹ: ಸಿಎಂಗೆ ಪತ್ರ ಬರೆದ ಮಾಜಿ ಸಚಿವ ಡಿ.ಕೆ ಶಿವಕುಮಾರ್…

ಕನಕಪುರಕ್ಕೆ ಮೆಡಿಕಲ್ ಕಾಲೇಜು ನೀಡುವಂತೆ ಆಗ್ರಹ: ಸಿಎಂಗೆ ಪತ್ರ ಬರೆದ ಮಾಜಿ ಸಚಿವ ಡಿ.ಕೆ ಶಿವಕುಮಾರ್…

ಬೆಂಗಳೂರು,ಡಿ,7,2019(www.justkannada.in):ಮೈತ್ರಿ ಸರ್ಕಾರದ ವೇಳೆ ಕನಕಪುರಕ್ಕೆ ಮಂಜೂರಾಗಿದ್ದ ವೈದ್ಯಕೀಯ ಕಾಲೇಜನ್ನು ರದ್ದುಪಡಿಸಿರುವದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಇದೀಗ ಕನಕಪುರಕ್ಕೆ ಮೆಡಿಕಲ್ ಕಾಲೇಜು ನೀಡುವಂತೆ ಆಗ್ರಹಿಸಿ ಸಿಎಂ ಬಿಎಸ್ ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ.

ಈ ಕುರಿತು ಯಡಿಯೂರಪ್ಪ ಅವರಿಗೆ ಬರೆದಿರುವ ಪತ್ರ ಬರೆದಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್, ಕನಕಪುರಕ್ಕೆ ಮಂಜೂರಾಗಿದ್ದ ವೈದ್ಯಕೀಯ ಕಾಲೇಜು ರದ್ದುಪಡಿಸಿ ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ಕೊಟ್ಟಿದ್ದೀರಿ.  ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ನೀಡಿರುವುದಕ್ಕೆ ನನ್ನ ಅಭ್ಯಂತರವಿಲ್ಲ. ಆದರೆ ಕನಕಪುರಕ್ಕೂ ಮೆಡಿಕಲ್ ಕಾಲೇಜು ಮಂಜೂರು ಮಾಡಿ ಭೂಮಿಪೂಜೆ ನೆರವೇರಿಸಲು ಸಮಯ ನೀಡುವಂತೆ ಮನವಿ ಮಾಡಿದ್ದಾರೆ.

ಹಾಗೆಯೇ ಒಂದು ವೇಳೆ ಕನಕಪುರಕ್ಕೆ ಮೆಡಿಕಲ್ ಕಾಲೇಜು ನೀಡದಿದ್ದರೇ ಹೋರಾಟ ಮಾಡಲಾಗುತ್ತದೆ ಎಂದು ಬಿಎಸ್ ವೈ ಸರ್ಕಾರಕ್ಕೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

Key words: Medical college – – Kanakapura-Former minister- DK Sivakumar – letter -CM.