ಮೇಕೆದಾಟು ಪಾದಯಾತ್ರೆ ಸಮಾರೋಪ ಸಮಾರಂಭ: ಕಾಂಗ್ರೆಸ್ ನಾಯಕರು ಭಾಗಿ.

ಬೆಂಗಳೂರು,ಮಾರ್ಚ್,3,2022(www.justkannada.in):  ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿದ್ದ ಪಾದಯಾತ್ರೆ ಕೊನೆಗೊಂಡಿದ್ದು ಇಂದು ಬೆಂಗಳೂರಿನಲ್ಲಿ ಸಮಾರೋಪ ಸಮಾರಂಭ ಆಯೋಜನೆ ಮಾಡಿದೆ.

ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಮೇಕೆದಾಟು ಪಾದಯಾತ್ರೆ ಸಮಾರೋಪ ಸಮಾರಂಭ ನಡೆಯುತ್ತಿದ್ದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ವಿಪಕ್ಷ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿ ಹಲವರು ಭಾಗಿಯಾಗಿದ್ದಾರೆ.

ವೇದಿಕೆಯಲ್ಲಿ 250 ನಾಯಕರಿಗೆ ಆಸನ ವ್ಯವಸ್ಥೆ ಮಾಡಲಾಗಿದ್ದು, ಕಾರ್ಯಕ್ರಮಕ್ಕೆ ಕಾಂಗ್ರೆಸ್ ಕಾರ್ಯಕರ್ತರು  ಆಗಮಿಸುತ್ತಿದ್ದಾರೆ. ಫೆಬ್ರವರಿ 27 ರಿಂದ ರಾಮನಗರದಿಂದ ಎರಡನೇ ಹಂತದ ಪಾದಯಾತ್ರೆ ಆರಂಭವಾಗಿತ್ತು.

Key words: Meekadatu-padayatra-Congress -leaders