ಎನ್‌ ಇಪಿ ರದ್ದು ಮಾಡುವ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಸೆ.28 ರಂದು ಶಿಕ್ಷಣ ತಜ್ಞರ ಸಭೆ.

ಬೆಂಗಳೂರು,ಸೆಪ್ಟಂಬರ್, 26,2023(www.justkannada.in): ಎನ್‌ ಇಪಿ ರದ್ದು ಮಾಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿ ಶಿಕ್ಷಣ ತಜ್ಞರ ಸಭೆಯನ್ನು ಸೆಪ್ಟೆಂಬರ್ 28 ರಂದು ಏರ್ಪಡಿಸಲಾಗಿದೆ ಎಂದು ಮೈಸೂರು ವಿ.ವಿ. ಮಾಜಿ ಸಿಂಡಿಕೇಟ್ ಸದಸ್ಯ ಡಾ. ಈ.ಸಿ.‌ನಿಂಗರಾಜ್ ಗೌಡ ತಿಳಿಸಿದರು.

ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಎನ್‌ಇಪಿ ರದ್ದು ಮಾಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿ ಹಾಗೂ ಇದರ ಪರಿಣಾಮಗಳ ಬಗ್ಗೆ ಅವಲೋಕಿಸಲು ಪೀಪಲ್ಸ್ ಫೋರಮ್ ಫಾರ್ ಕರ್ನಾಟಕ ಎಜುಕೇಷನ್, ಮೈಸೂರು ವತಿಯಿಂದ ದಿನಾಂಕ 28-09-2023 ಗುರುವಾರ ಮೈಸೂರಿನ ನಜರ್‌ಬಾದ್ ಪೋಲೀಸ್ ಸ್ಟೇಷನ್ ಹತ್ತಿರ ಇರುವ ವಿಕೆ ಫಂಕ್ಷನ್ ಹಾಲ್ ನಲ್ಲಿ ಬೆಳಗ್ಗೆ 11 ಗಂಟೆಯಿಂದ ಶಿಕ್ಷಣ ತಜ್ಞರ ವಿಶೇಷ ಸಭೆಯನ್ನು ಏರ್ಪಡಿಸಲಾಗಿದೆ.

ಈ ಸಭೆಯ ಅಧ್ಯಕ್ಷತೆಯನ್ನು ಕುವೆಂಪು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿಗಳಾದ ಪ್ರೊ ಕೆ ಚಿದಾನಂದ ಗೌಡ ರವರು ವಹಿಸಲಿದ್ದಾರೆ. ಮುಖ್ಯ ವಕ್ತಾರರಾಗಿ ಬೆಂಗಳೂರಿನ ಹಿರಿಯ ಪತ್ರಕರ್ತರಾದ ರವೀಂದ್ರ ರೇಷ್ಮೆ, ಬೆಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿಗಳಾದ ಪ್ರೊ ವೇಣುಗೋಪಾಲ್, ಸೆಸ್ ನ ನಿರ್ದೇಶಕರಾದ ಗೌರೀಶ್ ಹಾಗೂ ಕರ್ನಾಟಕ ಸರ್ಕಾರದ ಮಾಜಿ ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್ ಅಶ್ವಥ್ ನಾರಾಯಣ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಪ್ರೋ. ಜಿ.ಸಿ ರಾಜಣ್ಣ , ಬಿಜೆಪಿ ಮುಖಂಡ ವಸಂತ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Key words: meeting – education -experts -sep 28 -condemned – cancel –NEP-mysore