Thursday, August 13, 2026

BDA Apartments

Home Front Page ಇದು ಡಿಕೆ ಬ್ರದರ್ಸ್ ಪಾದಯಾತ್ರೆ ಅಲ್ಲ. ಕಾಂಗ್ರೆಸ್ ಪಾದಯಾತ್ರೆ- ಮಾಜಿ ಸಚಿವ ಎಂ.ಬಿ ಪಾಟೀಲ್.

ಇದು ಡಿಕೆ ಬ್ರದರ್ಸ್ ಪಾದಯಾತ್ರೆ ಅಲ್ಲ. ಕಾಂಗ್ರೆಸ್ ಪಾದಯಾತ್ರೆ- ಮಾಜಿ ಸಚಿವ ಎಂ.ಬಿ ಪಾಟೀಲ್.

ಬೆಂಗಳೂರು,ಮಾರ್ಚ್3,2022(www.justkannada.in):  ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ನಡೆಸುತ್ತಿರುವ ಪಾದಯಾತ್ರೆ ಡಿಕೆ ಬ್ರದರ್ಸ್ ಪಾದಯಾತ್ರೆ ಅಲ್ಲ. ಅದು ಕಾಂಗ್ರೆಸ್ ಪಾದಯಾತ್ರೆ ಎಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಟಾಂಗ್ ನೀಡಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಮಾಜಿ ಸಚಿವ ಎಂ.ಬಿ ಪಾಟೀಲ್,  ಮೇಕೆದಾಟು ಯೋಜನೆಗಾಗಿ ಡಿಪಿಆರ್ ಸಿದ್ಧಪಡಿಸಿದ್ದು ಕಾಂಗ್ರೆಸ್. ಆದರೆ ಈಗ  ಯೋಜನೆ ಅನುಷ್ಟಾನ ಮಾಡದೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕಾಲ ಹರಣ ಮಾಡುತ್ತಿದ್ದಾರೆ. ಖಾಲಿ ಜಾಹೀರಾತು ನೀಡಿ ಕಾಲಹರಣ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಸಚಿವ ಕೆ.ಎಸ್ ಈಶ್ವರಪ್ಪ ರಾಷ್ಟ್ತಧ್ವಜಕ್ಕೆ ಅಪಮಾನ ಮಾಡಿದ್ದಕ್ಕೆ  ಉಭಯ ಸದನದಲ್ಲಿ ಕಾಂಗ್ರೆಸ್ ಹೋರಾಟ ಮಾಡಿತ್ತು . ಬಿಜೆಪಿ ರಾಜಕೀಯ ಬಿಟ್ಟು ಮೇಕೆದಾಟು ಯೋಜನೆ ಅನುಷ್ಟಾನ ಮಾಡಲಿ ಎಂದು ಎಂ.ಬಿ ಪಾಟೀಲ್ ಆಗ್ರಹಿಸಿದರು.

Key words: mekedatu-padayatra-MB Patil